ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀದರ್: ಮೋದಿ ಕೈಯಿಂದಲೇ ಉದ್ಘಾಟನೆ ಗುರಿ - 2360 ಕೋಟಿ ರೂ. ಪವರ್ ಗ್ರಿಡ್ ಕಾಮಗಾರಿಗೆ ಶಾಸಕರಿಂದ ಚುರುಕು

ಬೀದರ್: ಬೀದರ್ ಜಿಲ್ಲೆಯ ಕಮಲನಗರ ತಾಲ್ಲೂಕಿನ ಚಿಮ್ಮೇಗಾಂವ ಗ್ರಾಮದಲ್ಲಿ 2,360 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಬೃಹತ್ ಪವರ್ ಗ್ರಿಡ್ ಉಪಕೇಂದ್ರದ ಕಾಮಗಾರಿ ಅಂತಿಮ ಹಂತ ತಲುಪಿದೆ. ಈ ಹಿನ್ನೆಲೆಯಲ್ಲಿ, ಶಾಸಕ ಪ್ರಭು ಚೌಹಾಣ್ ಅವರು ಕಾಮಗಾರಿಯನ್ನು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಸೂಚನೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಕೈಯಿಂದಲೇ ಉದ್ಘಾಟನೆ ಮಾಡಿಸುವ ಲೆಕ್ಕಾಚಾರದಲ್ಲಿ ಶಾಸಕ ಪ್ರಭು ಚೌಹಾಣ್ ಈ ಕಾಮಗಾರಿಯನ್ನು ತ್ವರಿತಗೊಳಿಸಲು ನಿರ್ದೇಶನ ನೀಡಿದ್ದಾರೆ.

ಅಭಿವೃದ್ಧಿ ಮತ್ತು ಉದ್ಯೋಗದ ಆಶಯ

ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್‌ನಿಂದ 163 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಉಪಕೇಂದ್ರದ ಶೇ.80ರಷ್ಟು ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ. ಉಳಿದ ಕಾಮಗಾರಿಯನ್ನು ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಮುಗಿಸುವಂತೆ ಶಾಸಕ ಚೌಹಾಣ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಔರಾದ್ ಕ್ಷೇತ್ರವು ಹಿಂದುಳಿದ ಪ್ರದೇಶವಾಗಿದ್ದು, ಕೈಗಾರಿಕೆಗಳ ಅಭಿವೃದ್ಧಿಯ ಮೂಲಕ ಕ್ಷೇತ್ರವನ್ನು ಪ್ರಗತಿಯತ್ತ ಕೊಂಡೊಯ್ಯುವ ಉದ್ದೇಶದಿಂದ ಚೌಹಾಣ್ ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಈ ಮಹತ್ವದ ಯೋಜನೆಯನ್ನು ಜಾರಿಗೆ ತಂದಿದ್ದರು. ಈ ಪವರ್ ಗ್ರಿಡ್‌ನಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿರುವ ಚೌಹಾಣ್, ಇದರಿಂದ ಈ ಭಾಗದ ನಿರುದ್ಯೋಗ ಸಮಸ್ಯೆಯೂ ನಿವಾರಣೆಯಾಗಲಿದೆ ಎಂದು ಆಶಿಸಿದ್ದಾರೆ. ಇದಲ್ಲದೆ, ಮುಂದಿನ ದಿನಗಳಲ್ಲಿ ಔರಾದ್-ಕಮಲನಗರ ಭಾಗದಲ್ಲಿ ಸೌರ ವಿದ್ಯುತ್ ಪಾರ್ಕ್ ನಿರ್ಮಿಸುವ ಗುರಿಯನ್ನೂ ಅವರು ಹೊಂದಿದ್ದಾರೆ.

Edited By :
PublicNext

PublicNext

07/06/2026 04:51 pm

Cinque Terre

7.15 K

Cinque Terre

0