ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಬಳ್ಳಾಪುರ: ಎಂ.ಸಿ. ಸುಧಾಕರ್ ಗೆ ಸಚಿವ ಸ್ಥಾನಕ್ಕೆ ಹೆಚ್ಚಿದ ಒತ್ತಾಯ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಮಾಜಿ ಸಚಿವ ಎಂ.ಸಿ. ಸುಧಾಕರ್ ಗೆ ಮತ್ತೆ ಸಚಿವ ಸ್ಥಾನವನ್ನು ಮುಂದುವರೆಸಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು, ಬೆಂಬಲಿಗರು ತೀವ್ರ ಒತ್ತಾಯ ಹೇರಿದ್ದಾರೆ. ಈ ಹಿಂದೆ ಉನ್ನತ ಶಿಕ್ಷಣ ಇಲಾಖೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಯಶಸ್ವಿಯಾಗಿ ಕಾರ್ಯನಿರ್ವಹಿಸಿರುವ ಸುಧಾಕರ್ ಅವರ ದಕ್ಷತೆಯನ್ನು ಮುಖಂಡರು ಶ್ಲಾಘಿಸಿದ್ದಾರೆ.

ಅಭಿವೃದ್ಧಿಯ ಹಿತದೃಷ್ಟಿಯಿಂದ ಅವರನ್ನು ಮುಂದಿನ ಎರಡು ವರ್ಷಗಳ ಕಾಲ ಉನ್ನತ ಶಿಕ್ಷಣ ಇಲಾಖೆಯ ಸಚಿವರಾಗಿಯೇ ಮುಂದುವರೆಸಬೇಕು ಎಂದು ಸರ್ಕಾರಕ್ಕೆ ಪ್ರಬಲ ಒತ್ತಾಯ ಮಾಡಿದ್ದಾರೆ.

Edited By :
PublicNext

PublicNext

07/06/2026 05:08 pm

Cinque Terre

7.38 K

Cinque Terre

0

ಸಂಬಂಧಿತ ಸುದ್ದಿ