ಸಕಲೇಶಪುರ: ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಮತ್ತು ಸುಗಮ ಸಂಚಾರಕ್ಕೆ ಆದ್ಯತೆ ನೀಡುತ್ತಿರುವ ಶಾಸಕ ಸಿಮೆಂಟ್ ಮಂಜು ಆಲೂರು ನಗರದಿಂದ ಭೈರಾಪುರದವರೆಗೆ ನಿರ್ಮಾಣವಾಗುತ್ತಿರುವ ದ್ವಿಪಥ ಡಾಂಬರ್ ರಸ್ತೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಕಾಮಗಾರಿಯ ಗುಣಮಟ್ಟ, ಪ್ರಗತಿ ಹಾಗೂ ಸಾರ್ವಜನಿಕರಿಗೆ ಶೀಘ್ರದಲ್ಲಿ ಉತ್ತಮ ರಸ್ತೆ ಸೌಲಭ್ಯ ದೊರೆಯುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಹಲವು ವರ್ಷಗಳಿಂದ ಉತ್ತಮ ರಸ್ತೆಗಾಗಿ ಕಾಯುತ್ತಿದ್ದ ಜನರಿಗೆ ಈ ಕಾಮಗಾರಿ ಹೊಸ ಭರವಸೆ ಮೂಡಿಸಿದ್ದು, ಸಂಚಾರ ಹಾಗೂ ವ್ಯಾಪಾರ ಚಟುವಟಿಕೆಗಳಿಗೆ ಮತ್ತಷ್ಟು ಅನುಕೂಲ ಕಲ್ಪಿಸಲಿದೆ.
"ಅಭಿವೃದ್ಧಿ ಎಂಬುದು ಕೇವಲ ಭರವಸೆಯಾಗಿರದೆ ಜನರ ಬದುಕಿನಲ್ಲಿ ಕಾಣುವ ಬದಲಾವಣೆಯಾಗಬೇಕು" ಎಂಬ ನಿಟ್ಟಿನಲ್ಲಿ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿರುವ ಶಾಸಕ ಸಿಮೆಂಟ್ ಮಂಜು ಅವರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
PublicNext
07/06/2026 05:23 pm
LOADING...