ಚಳ್ಳಕೆರೆ: ತಾಲೂಕಿನ ಗೋಪನಹಳ್ಳಿ ಗ್ರಾಮದ ದಲಿತ ಕಾಲೋನಿಯಲ್ಲಿ ಚರಂಡಿ ಅಕ್ರಮ ಒತ್ತುವರಿಯಿಂದಾಗಿ ತ್ಯಾಜ್ಯ ನೀರು ಸರಾಗವಾಗಿ ಹರಿಯದೆ ಮುಖ್ಯ ರಸ್ತೆಯಲ್ಲೇ ನಿಂತು ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟುಮಾಡಿದೆ. ರಸ್ತೆಯ ಮೇಲೆ ಕೊಳಚೆ ನೀರು ಸಂಗ್ರಹದಿಂದ ಚರಂಡಿಯ ಕೊಳಚೆ ನೀರಲ್ಲಿ ಹುಳುಗಳು ಕಾಣಿಸುವ ಜೊತೆಗೆ ದುರ್ವಾಸನೆ ವ್ಯಾಪಿಸಿದ್ದು, ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಇದರಿಂದ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದ್ದು, ಕಾಲೋನಿಯ ನಿವಾಸಿಗಳು ಆತಂಕದಲ್ಲಿ ದಿನ ಕಳೆಯುವಂತಾಗಿದೆ.
ಈ ಕುರಿತು ಹಲವು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳದಿರುವುದಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ಆರೋಗ್ಯಕ್ಕೆ ಅಪಾಯ ಉಂಟಾಗುವ ಮುನ್ನವೇ ಚರಂಡಿಯ ಮೇಲಿನ ಅಕ್ರಮ ಒತ್ತುವರಿ ತೆರವುಗೊಳಿಸಿ, ತ್ಯಾಜ್ಯ ನೀರು ಸರಾಗವಾಗಿ ಹರಿಯುವಂತೆ ಶಾಶ್ವತ ಪರಿಹಾರ ಕಲ್ಪಿಸಲು ಈಗಲಾದರೂ ಅಧಿಕಾರಿಗಳು ಮುಂದಾಗುವರೇ ಎಂದು ಕಾದು ನೋಡಬೇಕಿದೆ.
Kshetra Samachara
07/06/2026 07:11 pm
LOADING...