ವಿಜಯಪುರ: ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ್‌ಗೆ ಡಿ. ಕೆ. ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪಟ್ಟಣದಲ್ಲಿ ಅಪಾರ ಸಂಖ್ಯೆಯ ಕಾರ್ಯಕರ್ತರು ಹಕ್ಕೊತ್ತಾಯ ಮಂಡಿಸಿದರು.
ಮೂಲನಂದಿಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಶಿವಾನಂದ ಪಾಟೀಲ್ ಫೋಟೋ ಹಿಡಿದು ಘೋಷಣೆ ಕೂಗಿದ ಬೆಂಬಲಿಗರು ಸಚಿವ ಸ್ಥಾನಕ್ಕಾಗಿ ಆಗ್ರಹಿಸಿದರು.
ಶಿವಾನಂದ ಪಾಟೀಲ್ ಹಿರಿಯ ನಾಯಕರಾಗಿದ್ದಾರೆ. ಈ ಹಿಂದೆ ಎರಡು ಸಲ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದಾರೆ ಡಿಕೆ ಶಿವಕುಮಾರ್ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ನಾಯಕರಿಗೆ ಮುಖಂಡರು ಒತ್ತಾಯಿಸಿದರು.
PublicNext
07/06/2026 10:47 pm
LOADING...