ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ:ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ವತಿಯಿಂದ ಪ್ರತಿಭಾ ಪುರಸ್ಕಾರ

ಮುಲ್ಕಿ:ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮುಲ್ಕಿ ಹಾಗೂ ಹಳೆಯಂಗಡಿ ವಲಯದ ಆಶ್ರಯದಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಮುಲ್ಕಿ ಬಿಲ್ಲವ ಸಂಘದ ಸಭಾಭವನದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ದಕ ಜಿಲ್ಲೆಯ ಕೆ ಎಸ್ ಟಿ ಎ ಅಧ್ಯಕ್ಷ ಜಯಂತ್ ಉರ್ಲಾಂಡಿ, ಮಾತನಾಡಿ ಸವಲತ್ತುಗಳನ್ನು ಪಡೆದು ಸಾಧಕರಾಗಿ ಎಂದರು.

ವೇದಿಕೆಯಲ್ಲಿ ಮುಲ್ಕಿ ಬಿಲ್ಲವ ಸಂಘದ ಪ್ರಧಾನ ಕಾರ್ಯದರ್ಶಿ ಜಯ ಕುಮಾರ್ ಕುಬೆವೂರು ಕೆ ಎಸ್ ಟಿ ಎ ಕ್ಷೇತ್ರ ಸಮಿತಿ ಅಧ್ಯಕ್ಷ ರವಿ ಜೆ ಅಮೀನ್,ವಲಯ ಅಧ್ಯಕ್ಷರುಗಳಾದ ಪ್ರೀತಿಕಾ ಡಿ, ಶಕಿಲಾ ಎಂ, ಕಾರ್ಯದರ್ಶಿಗಳಾದ ಸುಜಾತ ರಾವ್,ಅಶ್ವಿನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೀತಿಕಾ ಡಿ ಸ್ವಾಗತಿಸಿದರು.ಶಕಿಲಾ ಎಂ ಧನ್ಯವಾದ ನೀಡಿದರು. ಉದಯ ಅಮೀನ್ ಮಟ್ಟು ಕಾರ್ಯಕ್ರಮ ನಿರೂಪಿಸಿದರು.

Edited By : PublicNext Desk
Kshetra Samachara

Kshetra Samachara

08/06/2026 04:15 pm

Cinque Terre

1.12 K

Cinque Terre

0

ಸಂಬಂಧಿತ ಸುದ್ದಿ