ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಟ್ಕಳ: ಅಪ್ರಾಪ್ತ ಬಾಲಕನಿಗೆ ವಾಹನ ಚಾಲನೆಗೆ ಅವಕಾಶ, ಮಾಲೀಕರಿಗೆ 25 ಸಾವಿರ ದಂಡ

ಭಟ್ಕಳ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ದ್ವಿಚಕ್ರ ವಾಹನ ಚಾಲನೆ ಮಾಡಲು ಅವಕಾಶ ನೀಡಿದ ಪ್ರಕರಣದಲ್ಲಿ ವಾಹನದ ಮಾಲೀಕರಿಗೆ ನ್ಯಾಯಾಲಯ ₹25 ಸಾವಿರ ದಂಡ ವಿಧಿಸಿದೆ.

ಮುರುಡೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದಲ್ಲಿ, ದ್ವಿಚಕ್ರ ವಾಹನವನ್ನು ಅಪ್ರಾಪ್ತ ಬಾಲಕನಿಂದ ಚಾಲನೆ ಮಾಡಿಸಲು ಅವಕಾಶ ನೀಡಿದ ಆರೋಪದಡಿ ನ್ಯಾಷನಲ್ ಕಾಲೋನಿಯ ನಿವಾಸಿ ಸೀಮಾ ಅಖ್ತರ್ ಶೇಖ್ ಮೋಹಿದ್ದಿನ್ ಶಿರೂರ್ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು.

ಮುರುಡೇಶ್ವರ ಪೊಲೀಸ್ ಠಾಣೆಯ ಪಿಎಸ್‌ಐ ಹನುಮಂತ ಬಿರಾದಾರ್ ಅವರು ಮೋಟಾರು ವಾಹನ ಕಾಯ್ದೆಯ ಕಲಂ 5 ಹಾಗೂ 199(ಎ) ಅಡಿಯಲ್ಲಿ ವಾಹನದ ಮಾಲೀಕರ ವಿರುದ್ಧ ದೋಷಾರೋಪಣಾ ಪತ್ರವನ್ನು ಭಟ್ಕಳದ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು,ಅಪ್ರಾಪ್ತ ಬಾಲಕನಿಗೆ ವಾಹನ ಚಾಲನೆಗೆ ಅವಕಾಶ ಮಾಡಿಕೊಟ್ಟಿರುವುದು ಸಾಬೀತಾದ ಹಿನ್ನೆಲೆಯಲ್ಲಿ ವಾಹನದ ಮಾಲೀಕರಾದ ಸೀಮಾ ಅಖ್ತರ್ ಶೇಖ್ ಮೋಹಿದ್ದಿನ್ ಶಿರೂರ್ ಅವರಿಗೆ ₹25,000 ದಂಡ ವಿಧಿಸಿ ಆದೇಶ ನೀಡಿದೆ.

ಪೊಲೀಸರು,ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಾಹನ ಚಾಲನೆಗೆ ಅವಕಾಶ ನೀಡುವುದು ಕಾನೂನುಬಾಹಿರವಾಗಿದ್ದು,ಇಂತಹ ಪ್ರಕರಣಗಳಲ್ಲಿ ವಾಹನದ ಮಾಲೀಕರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

Edited By : PublicNext Desk
Kshetra Samachara

Kshetra Samachara

08/06/2026 06:57 pm

Cinque Terre

3.5 K

Cinque Terre

0