ಭಟ್ಕಳ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ್ದ ಆರೋಪದಡಿ ಇಬ್ಬರು ವ್ಯಕ್ತಿಗಳ ವಿರುದ್ಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಪಟ್ಟಣದ ಚೌಕ್ ಬಜಾರ್ ಹಾಗೂ ಛಾಯಾ ಲಾಡ್ಜ್ ಸಮೀಪ ಸಾರ್ವಜನಿಕ ಸ್ಥಳಗಳಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ವಿಚಾರಣೆಯ ವೇಳೆ ಅವರು ಗಾಂಜಾ ಸೇವನೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಬಳಿಕ ಇಬ್ಬರನ್ನೂ ಭಟ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ವೈದ್ಯಕೀಯ ವರದಿಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸಿದ್ದೀಕ್ ಸ್ಟ್ರೀಟ್ ನಿವಾಸಿ ಶಯನ್ ಮರ್ಜನ್ (39) ಹಾಗೂ ಸಿದ್ದೀಕ್ ಸ್ಟ್ರೀಟ್ ನಿವಾಸಿಯಾಗಿದ್ದು, ಪ್ರಸ್ತುತ ಅಜಾದ್ ನಗರದಲ್ಲಿ ವಾಸವಾಗಿರುವ ಇಬ್ರಾಹಿಂ ಖಲೀಲ್ ಸೈಯದ್ (47) ವಿರುದ್ಧ ಪ್ರಕರಣ ದಾಖಲಾಗಿದೆ.
ಮೊದಲ ಪ್ರಕರಣದಲ್ಲಿ ಪಿಎಸೈ ನವೀನ್ ನಾಯ್ಕ ಹಾಗೂ ಎರಡನೇ ಪ್ರಕರಣದಲ್ಲಿ ಪಿಎಸೈ ರವಿ ಎಂ. ಗಾಂಜೇಕರ ಅವರು ದೂರು ನೀಡಿದ್ದು, ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
Kshetra Samachara
08/06/2026 06:58 pm
LOADING...