ನಂಜನಗೂಡು: ತಾಲ್ಲೂಕಿನಲ್ಲಿ ಸಮಗ್ರ ನೀರಾವರಿ ಯೋಜನೆಯನ್ನು ರೂಪಿಸಬೇಕು. ಹಳಿ ತಪ್ಪಿದ ತಾಲ್ಲೂಕು ಆಡಳಿತದ ವಿರುದ್ಧ ರೈತರು ಸಿಡಿದೆದ್ದು, ಬೃಹತ್ ಬಾರುಕೋಲು ಚಳುವಳಿಯನ್ನು ನಡೆಸಿದರು.
ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನಂಜನಗೂಡು ತಾಲ್ಲೂಕು ಘಟಕ, ದಲಿತ ಸಂಘಟನೆ ಮತ್ತು ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಬೃಹತ್ ಬಾರುಕೋಲು ಅನಿರ್ಧಿಷ್ಟಾವಧಿ ಚಳುವಳಿಯನ್ನು ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಟಿ.ಆರ್ ವಿದ್ಯಾಸಾಗರ್, ಜಿಲ್ಲಾಧ್ಯಕ್ಷ ಸತೀಶ್ ರಾವ್ , ರಾಜ್ಯ ಉಪಾಧ್ಯಕ್ಷ ಇಮ್ಮಾವು ರಘು ಮತ್ತು ತಾಲ್ಲೂಕು ಅಧ್ಯಕ್ಷ ಸೂರಹಳ್ಳಿ ಮಹದೇವ ನಾಯಕ ನೇತೃತ್ವದಲ್ಲಿ ನಂಜನಗೂಡು ನಗರದ ಡಾ.ಬಿ.ಆರ್ ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪಾರ್ಚನೆ ಸಲ್ಲಿಸಿ ಬಾರುಕೋಲು ಚಳುವಳಿಗೆ ಚಾಲನೆ ನೀಡಿದರು.
ನಂಜನಗೂಡಿನ ಎಂ.ಜಿ ರಸ್ತೆ, ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಲ್ನಡಿಗೆ ಮೂಲಕ ತಾಲ್ಲೂಕು ಆಡಳಿತ ಭವನದವರೆಗೆ ಬೃಹತ್ ಪಾದಯಾತ್ರೆ ನಡೆಸಿದರು. ತಾಲ್ಲೂಕು ಆಡಳಿತ ಭವನದ ಮುಂಭಾಗದಲ್ಲಿ ಜಮಾವಣೆಗೊಂಡು, ತಾಲ್ಲೂಕು ಆಡಳಿತ ಮತ್ತು ಜನಪ್ರತಿನಿಧಿಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
PublicNext
08/06/2026 09:04 pm
LOADING...