ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಿಗೆರೆ: ಚಾರ್ಮಾಡಿ ಘಾಟಿ ಭೂಕುಸಿತ ಸಂಭಾವ್ಯ ಪ್ರದೇಶಕ್ಕೆ ಡಿಸಿ ಭಂವರ್‌ಸಿಂಗ್ ಮೀನಾ ಭೇಟಿ, ಪರಿಶೀಲನೆ

ಮೂಡಿಗೆರೆ: ಮುಂಗಾರು ಮಳೆ ಚುರುಕಾಗುತ್ತಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಭಂವರ್‌ಸಿಂಗ್ ಮೀನಾ ಅವರು ಸೋಮವಾರ ಚಾರ್ಮಾಡಿ ಘಾಟಿ ರಸ್ತೆಯ ಭೂಕುಸಿತ ಸಂಭಾವ್ಯ ಪ್ರದೇಶಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಘಾಟಿ ಪ್ರದೇಶದಲ್ಲಿ ವಾಹನ ಸವಾರರ ಸುರಕ್ಷತೆಗೆ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ತುರ್ತು ಸಂದರ್ಭಗಳಲ್ಲಿ ಸ್ಪಂದಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಈ ಭೇಟಿಯ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ.ಜಯಕುಮಾರ್, ಉಪವಿಭಾಗಾಧಿಕಾರಿ ನಟೇಶ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ದಿವಾಕರ್ ಸೇರಿದಂತೆ ವಿವಿಧ ಇಲಾಖೆಗಳ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದು, ಕೈಗೊಂಡಿರುವ ಮುನ್ನೆಚ್ಚರಿಕೆಗಳ ಬಗ್ಗೆ ಮಾಹಿತಿ ನೀಡಿದರು.

Edited By : PublicNext Desk
PublicNext

PublicNext

08/06/2026 09:20 pm

Cinque Terre

7.65 K

Cinque Terre

0

ಸಂಬಂಧಿತ ಸುದ್ದಿ