ಹುಬ್ಬಳ್ಳಿ: ಮುಂದೆ ಹೋಗುತ್ತಿದ್ದ ಟ್ರ್ಯಾಕ್ಟರ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ ಹೊಡೆದು ರಸ್ತೆ ಬದಿಯಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹುಬ್ಬಳ್ಳಿಯಿಂದ ಹಾವೇರಿ ಕಡೆಗೆ ಹೋಗುತ್ತಿದ್ದ ಟ್ರ್ಯಾಕ್ಟರ್ ಗೆ ತಡಸ ಕ್ರಾಸ್ ಬಳಿಯಲ್ಲಿ ಹಿಂಬದಿಯಿಂದ ಅತಿ ಜೋರಾಗಿ ಬಂದ ಮಿನಿ ಗೂಡ್ಸ್ ವಾಹನ ಡಿಕ್ಕಿ ಹೊಡೆದು, ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ತಡಸ ಮೂಲದ ಪವನ ಎಂಬಾತನಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೇ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಅಪಘಾತವಾದ ವಾಹನಗಳನ್ನು ತೆರವುಗೊಳಿಸಿ ಬೇರೆ ವಾಹನಗಳ ಸಂಚಾರಕ್ಕೆ ಅನುಕೂಲ ಮಾಡಿ,ಮೃತಪಟ್ಟ ವ್ಯಕ್ತಿಯ ಶವವನ್ನು ಕಿಮ್ಸ್ ಶವಾಗಾರಕ್ಕೆ ರವಾನೆ ಮಾಡಿ ತನಿಖೆ ಮುಂದುವರೆಸಿದ್ದಾರೆ.
ವಿನಯ ರೆಡ್ಡಿ ಪಬ್ಲಿಕ್ ನೆಕ್ಸ್ಟ್
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
09/06/2026 08:16 am
LOADING...