ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಮಂಚೇನಹಳ್ಳಿ ತಾಲೂಕಿನ ದೇವಕೊಂಡನಹಳ್ಳಿ ಹಾಗೂ ನಾಗರಭಾವಿ ಗ್ರಾಮಗಳಿಗೆ ಅಧಿಕಾರಿಗಳೊಂದಿಗೆ ತೆರಳಿ ಜನರ ಸಮಸ್ಯೆಗಳನ್ನ ಆಲಿಸಿದ್ದಾರೆ. ಅಷ್ಟೇ ಅಲ್ಲದೆ ಮೂರು ಕೋಟಿ ವೆಚ್ಚದಲ್ಲಿ ಎರಡು ಗ್ರಾಮಗಳಿಗೆ ಸಂಪರ್ಕಿಸುವ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿದರು.
ಈ ವೇಳೆ ಮಂಚೇನಹಳ್ಳಿ ತಹಶೀಲ್ದಾರ್ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ರು. ನೆಲದಲ್ಲೇ ಕುಳಿತು ಜನರ ಸಮಸ್ಯೆ ಆಲಿಸಿರುವುದು ವಿಶೇಷವಾಗಿತ್ತು.
PublicNext
09/06/2026 08:21 am
LOADING...