ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ - ನಿಂತಿದ್ದ ಲಾರಿಗೆ ಡಿಕ್ಕಿ, ಐವರಿಗೆ ಗಂಭೀರ ಗಾಯ

ಹಾವೇರಿ: ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕುಣಿಮೆಳ್ಳಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಅಪಘಾತದಲ್ಲಿ 12 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡವರಲ್ಲಿ 50 ವರ್ಷದ ರಮೇಶ ಗುಂಡಪ್ಪ, 65 ವರ್ಷದ ನಾರಾಯಣಮ್ಮ, 20 ವರ್ಷದ ಗಗನಶ್ರೀ ಮತ್ತು 45 ವರ್ಷದ ಲಕ್ಷ್ಮಮ್ಮ ಸೇರಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತಕ್ಕೀಡಾದ ಟಿಟಿ ವಾಹನದಲ್ಲಿ ಬೆಂಗಳೂರಿನ ವೈಟ್‌ಫೀಲ್ಡ್ ಮೂಲದ ಒಂದೇ ಕುಟುಂಬದ 17 ಜನರು, ಮಕ್ಕಳು ಸೇರಿ, ಸವದತ್ತಿ ಯಲ್ಲಮ್ಮ ದೇವಿಯ ದರ್ಶನಕ್ಕೆ ತೆರಳುತ್ತಿದ್ದರು. ದೇವರ ದರ್ಶನಕ್ಕೆ ಹೊರಟಿದ್ದ ಕುಟುಂಬದವರಿಗೆ ಈ ದುರ್ಘಟನೆ ಸಂಭವಿಸಿದೆ.

Edited By : Somashekar
PublicNext

PublicNext

09/06/2026 11:52 am

Cinque Terre

10.4 K

Cinque Terre

0

ಸಂಬಂಧಿತ ಸುದ್ದಿ