ಗುಂಡ್ಲುಪೇಟೆ : ಶಾಲಾ ಅವಧಿಯಲ್ಲಿ ಟಿಪ್ಪರ್ ಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರೂ ನಿಯಮವನ್ನು ಗಾಳಿಗೆ ತೂರಿ ರಸ್ತೆಗಳಿದಿದ್ದ ಕೆಲವು ಟಿಪ್ಪರ್ ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಜಿಲ್ಲಾಧಿಕಾರಿ ಶ್ರೀರೂಪಾ ಅವರು ಮಕ್ಕಳ ರಕ್ಷಣೆಯ ಹಿತದೃಷ್ಟಿಯಿಂದ ಶಾಲಾ ಅವಧಿಯಲ್ಲಿನ ಬೆಳಗ್ಗೆ 8.30 ರಿಂದ 10.30 ರವರೆಗೆ ಟಿಪ್ಪರ್ ವಾಹನಗಳ ಸಂಚಾರವನ್ನು ಜಿಲ್ಲೆಯಲ್ಲಿ ನಿಷೇಧಿಸಿ ಆದೇಶ ಹೊರಡಿಸಿದ್ದರು. ಆದರೆ ಪಟ್ಟಣದ ಹೊರವಲಯದಲ್ಲಿ ಸಂಚಾರ ನಡೆಸುತ್ತಿದ್ದ ವಾಹನಗಳನ್ನು ಗುಂಡ್ಲುಪೇಟೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
PublicNext
09/06/2026 12:51 pm
LOADING...