ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಹನಿಟ್ರ್ಯಾಪ್ ಪ್ರಕರಣದ ಆರೋಪಿ ಯುವ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ

ಮಂಗಳೂರು: ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಮಾಡಿ 2.77ಕೋಟಿ ರೂ. ವಸೂಲಿ ಮಾಡಿರುವ ಪ್ರಕರಣದ ಆರೋಪಿ ಯುವ ಕಾಂಗ್ರೆಸ್ ಮುಖಂಡ ನಿಝಾಮ್‌ನನ್ನು ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯು ಯುವ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಉಚ್ಚಾಟನೆ ಮಾಡಲಾಗಿದೆ.

ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಇಬ್ರಾಹಿಂ ನವಾಜ್ ಈ ಬಗ್ಗೆ ತಕ್ಷಣದಿಂದ ಆದೇಶಕ್ಕೆ ಬರುವಂತೆ ಆದೇಶಿಸಿದ್ದಾರೆ.

ನಿಝಾಮ್ ಅವರ ಮೇಲೆ ಸಮಾಜ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಆರೋಪ ಬಂದಿರುವುದು ಪಕ್ಷದ ಶಿಸ್ತು ಹಾಗೂ ಗೌರವಕ್ಕೆ ಧಕ್ಕೆ ಉಂಟುಮಾಡಿರುವುದು ಗಮನಕ್ಕೆ ಬಂದಿರುತ್ತದೆ. ಈ ಹಿನ್ನೆಲೆಯಲ್ಲಿ ಪಕ್ಷದ ಹಿತಾಸಕ್ತಿ ಮತ್ತು ಶಿಸ್ತು ಕಾಪಾಡುವ ದೃಷ್ಟಿಯಿಂದ ಅವರನ್ನು ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಹಾಗೂ ಯುವ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದಲೇ ಉಚ್ಚಾಟನೆ ಮಾಡಲಾಗಿದೆ.

ಪಕ್ಷದ ಸಿದ್ಧಾಂತ, ಮೌಲ್ಯಗಳು ಮತ್ತು ಸಂಘಟನೆಯ ಹಿತಾಸಕ್ತಿಗೆ ವಿರುದ್ಧವಾಗಿ ಯಾವುದೇ ಚಟುವಟಿಕೆಗಳನ್ನು ಸಹಿಸಲಾಗುವುದಿಲ್ಲ. ಪಕ್ಷದ ಶಿಸ್ತು ಉಲ್ಲಂಘಿಸುವವರ ವಿರುದ್ಧ ಮುಂದೆಯೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಈ ಮೂಲಕ ತಿಳಿಸಲಾಗಿದೆ.

Edited By : Nirmala Aralikatti
PublicNext

PublicNext

09/06/2026 06:54 pm

Cinque Terre

12.38 K

Cinque Terre

1

ಸಂಬಂಧಿತ ಸುದ್ದಿ