ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ : ಕಾರು ಡಿಕ್ಕಿ - ಜಿಂಕೆ ಸಾವು, ಚಾಲಕನ ವಿರುದ್ಧ ಪ್ರಕರಣ ದಾಖಲು !

ಚಾಮರಾಜನಗರ : ಬಿಆರ್ ಟಿ ಹುಲಿ ಸಂರಕ್ಷಿತ ಪ್ರದೇಶದ ಚಾಮರಾಜನಗರ ಪ್ರಾದೇಶಿಕ ವಲಯ ವ್ಯಾಪ್ತಿಯ ನಂಜನಗೂಡು ರಸ್ತೆಯಲ್ಲಿರುವ ಮಕಾವು ಹೋಟೆಲ್ ಸಮೀಪ ಜಿಂಕೆಯೊಂದು ವಾಹನ ಅಪಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಸಂಭವಿಸಿದೆ.

ಗಂಡು ಜಿಂಕೆಯು ರಸ್ತೆ ದಾಟುವ ಸಂದರ್ಭದಲ್ಲಿ ನಿಸಾನ್ ಕಾರು ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸ್ಥಳದಲ್ಲೇ ಮೃತಪಟ್ಟಿದೆ. ಮೃತಪಟ್ಟ ಜಿಂಕೆಯು ಅಂದಾಜು 6 ರಿಂದ 7ವರ್ಷ ವಯಸ್ಸಿನದ್ದಾಗಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ವಾಹನ ಚಾಲಕ ಶ್ರೀ ದುರ್ಗಾ ಪ್ರಸಾದ್ ಅವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಪ್ರಕರಣ ದಾಖಲಿಸಲಾಗಿದೆ. ಅಪಘಾತಕ್ಕೀಡಾದ ವಾಹನವನ್ನು ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.

Edited By : PublicNext Desk
PublicNext

PublicNext

09/06/2026 07:33 pm

Cinque Terre

8.62 K

Cinque Terre

0

ಸಂಬಂಧಿತ ಸುದ್ದಿ