ಬ್ರಹ್ಮಾವರ : ಅನಿತಾ ಕಾಸರಗೋಡು ಅವರು ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಲವ (ಪೂಜಾರಿ) ಸಮಾಜದ ಬಗ್ಗೆ ಅವಹೇಳನಕಾರಿ ಹಾಗೂ ದ್ವೇಷ ಪ್ರಚೋದಿಸುವ ಹೇಳಿಕೆಗಳನ್ನು ನೀಡಿರುವುದನ್ನು ಬಿಲ್ಲವ ಸಮಾಜ ಸೇವಾ ಸಂಘ (ರಿ.) ಬ್ರಹ್ಮಾವರ ತೀವ್ರವಾಗಿ ಖಂಡಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇಂತಹ ಹೇಳಿಕೆಗಳು ಸಮಾಜದ ಭಾವನೆಗಳಿಗೆ ಧಕ್ಕೆ ಉಂಟುಮಾಡುವುದರ ಜೊತೆಗೆ ಸಮಾಜದಲ್ಲಿ ವೈಮನಸ್ಸು ಮತ್ತು ಅಶಾಂತಿ ಸೃಷ್ಟಿಸುವ ಪ್ರಯತ್ನವಾಗಿದೆ. ಆ ಪ್ರಯುಕ್ತ ಬ್ರಹ್ಮಾವರ ಪೊಲೀಸ್ ಠಾಣೆಗೆ ಸಂಘದ ವತಿಯಿಂದ ದೂರು ಸಲ್ಲಿಸಿ ಭಾರತೀಯ ನ್ಯಾಯ ಸಂಹಿತೆ ಬಿಎನ್ ಎಸ್ ಅನ್ವಯ ಪ್ರಕರಣ ದಾಖಲಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.
ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಬಿಎನ್ ಶಂಕರ ಪೂಜಾರಿ, ಉಪಾಧ್ಯಕ್ಷರುಗಳಾದ ರಾಘು ಪೂಜಾರಿ ಹೇರೂರು, ಸಂತೋಷ ಪೂಜಾರಿ ಬಿರ್ತಿ,ಕಾರ್ಯದರ್ಶಿ ಶೇಖರ್ ಪೂಜಾರಿ, ಖಜಾಂಚಿ ಮೋಹನ್ ಪೂಜಾರಿ, ಜೊತೆ ಕಾರ್ಯದರ್ಶಿಗಳಾದ ಅಶೋಕ್ ಪೂಜಾರಿ ಹೇರೂರು, ಉಮೇಶ್ ಪೂಜಾರಿ ಬಿರ್ತಿ,ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಕುಂದರ್, ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಪೂಜಾರಿ, ಮ್ಯಾನೇಜರ್ ಅಶೋಕ್ ಪೂಜಾರಿ, ಬಾಲಕೃಷ್ಣ ಪೂಜಾರಿ, ಸೀತಾರಾಮ್ ಪೂಜಾರಿ ಹಾಗೂ ಬಿಲ್ಲವ ಸಮಾಜ ಬಾಂಧವರು ಉಪಸ್ಥಿತರಿದ್ದರು.
PublicNext
09/06/2026 07:53 pm
LOADING...