ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಟ್ಕಳದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ - 84 ಗ್ರಾಂ ಗಾಂಜಾ, ಕಾರು ವಶ

ಭಟ್ಕಳ: ಗಾಂಜಾ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ನಿಷೇಧಿತ ಮಾದಕ ವಸ್ತುವನ್ನು ಸಂಗ್ರಹಿಸಿ ಇಟ್ಟಿದ್ದ ಆರೋಪದ ಮೇಲೆ ಯುವಕನೊಬ್ಬನ ವಿರುದ್ಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯನ್ನು ಅಬ್ರಾರ್ ಶೇಖ (24), ಮೋಹಿದ್ದೀನ್ ಶೇಖ ಅವರ ಪುತ್ರ, ಫಿರ್ದೋಸ್ ನಗರ, ಹೆಬಳೆ, ಭಟ್ಕಳ ನಿವಾಸಿ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ,ಭಟ್ಕಳ ನಗರದ ಮುಗ್ಧುಂ ಕಾಲೋನಿಯ ಮೌಂಟಿನ್ ಗ್ರೌಂಡ್ ಪ್ರದೇಶದಲ್ಲಿ ಆರೋಪಿತನು ಯಾವುದೇ ಪರವಾನಗಿ ಇಲ್ಲದೆ ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದಾನೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಲಾಯಿತು.

ದಾಳಿ ವೇಳೆ ಸುಮಾರು 84 ಗ್ರಾಂ ಗಾಂಜಾ (ಅಂದಾಜು ಮೌಲ್ಯ ₹5 ಸಾವಿರ) ಹಾಗೂ ಅದನ್ನು ಸಾಗಿಸಲು ಬಳಸಲಾಗಿದ್ದ ₹5 ಲಕ್ಷ ಮೌಲ್ಯದ ಬಿಳಿ ಬಣ್ಣದ ಹೋಂಡಾ ಸಿಟಿ ಕಾರು ಪತ್ತೆಯಾಗಿ ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಗಾಂಜಾ ಪ್ಯಾಕ್ ಮಾಡಲು ಬಳಸುವ 12 ಸಣ್ಣ ಪಾರದರ್ಶಕ ಖಾಲಿ ಸ್ಯಾಚೆಟ್‌ಗಳು ಸಹ ದೊರೆತಿವೆ.

ಈ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್‌ಐ ನವೀನ್ ಎಸ್. ನಾಯ್ಕ ಅವರು ಸರ್ಕಾರದ ಪರವಾಗಿ ದೂರು ದಾಖಲಿಸಿದ್ದಾರೆ.

Edited By : Nagaraj Tulugeri
PublicNext

PublicNext

09/06/2026 08:46 pm

Cinque Terre

7.64 K

Cinque Terre

0

ಸಂಬಂಧಿತ ಸುದ್ದಿ