ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ಮುಂಗಾರು ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಕುಡಿಯುವ ನೀರನ್ನು ಆಗಾಗ ಪರೀಕ್ಷೆ ಮಾಡಿ, ಶುದ್ಧ ಕುಡಿಯುವ ನೀರು ಪೂರೈಕೆಗೆ ಗಮನ ಹರಿಸಬೇಕು ಎಂದು ಶಾಸಕ ಮಂತರ್ ಗೌಡ ಸಲಹೆ ನೀಡಿದ್ದಾರೆ.
ನಗರದ ತಹಶೀಲ್ದಾರ್ ಅವರ ಕಚೇರಿಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಿಡಿಒಗಳು, ಕಂದಾಯ ಇಲಾಖೆ ಅಧಿಕಾರಿಗಳು, ಪೊಲೀಸರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಜೊತೆ ‘ಕಾರ್ಯಪಡೆ ಸಮಿತಿ ಸಭೆ’ ನಡೆಸಿ ಮಾತನಾಡಿದರು.
ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರವಹಿಸಬೇಕು. ತೆಂಗಿನ ಚಿಪ್ಪು, ಟೈರು ಮತ್ತಿತರ ವಸ್ತುಗಳಲ್ಲಿ ನೀರು ನಿಲ್ಲದಂತೆ ಗಮನಹರಿಸಬೇಕು. ಮಳೆ ನೀರು ಸರಾಗವಾಗಿ ಹರಿಯುವಂತಾಗಲು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಾಲುವೆ, ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯ ಆಗಬೇಕು. ರಸ್ತೆ ಬದಿ ಚರಂಡಿಯಲ್ಲಿ ಸರಾಗವಾಗಿ ನೀರು ಹರಿಯುವಂತಾಗಲು ಶುಚಿಗೊಳಿಸುವ ಕಾರ್ಯ ಆಗಬೇಕು ಎಂದು ಸಂಬಂಧಪಟ್ಟ ಎಂಜಿನಿಯರ್‍ಗಳಿಗೆ ಶಾಸಕರು ಸೂಚಿಸಿದರು.
Kshetra Samachara
10/06/2026 07:00 am
LOADING...