ಬೆಂಗಳೂರು : "ಪೇ ಸಿಎಂ" ಅಭಿಯಾನ, ಗ್ಯಾರಂಟಿ ಯೋಜನೆಗಳ ಪರಿಕಲ್ಪನೆಯ ಹಿಂದೆ ಕೆಲಸ ಮಾಡಿದ ತಂತ್ರಜ್ಞರೆಂದೇ ಖ್ಯಾತರಾದ ಸುನೀಲ್ ಕನುಗೋಳು ಅವರು ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರರಾಗಿ ನೇಮಕಗೊಂಡಿದ್ದಾರೆ.
ಬಳ್ಳಾರಿ ಮೂಲದ ಸುನೀಲ್ ಕನುಗೋಳು ಅವರನ್ನು ಈ ಹಿಂದೆ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗಲೂ ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿತ್ತು. ಸಿಎಂ ಮುಖ್ಯ ಸಲಹೆಗಾರರಾದ ಸುನಿಲ್ ಕನುಗೋಳು ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ಇರುತ್ತೆ ಎಂದು ಸಿಎಂ ಆಪ್ತ ಮೂಲಗಳು ತಿಳಿಸಿವೆ.
PublicNext
10/06/2026 07:23 am
LOADING...