ಬೆಂಗಳೂರು: ರಾಜ್ಯಸಭಾ ಚುನಾವಣೆಯ ಕಾವು ಹೆಚ್ಚಾಗುತ್ತಿರುವ ಬೆನ್ನಲ್ಲೇ, ಮಧ್ಯಪ್ರದೇಶದ ಕಾಂಗ್ರೆಸ್‌ನ 63 ಶಾಸಕರು ಸೇರಿದಂತೆ ಒಟ್ಟು 75 ಮಂದಿ ಬೆಂಗಳೂರಿಗೆ ಆಗಮಿಸಿದ್ದಾರೆ. ಭೋಪಾಲ್‌ನಿಂದ ವಿಶೇಷ ವಿಮಾನದ ಮೂಲಕ ಪ್ರಯಾಣ ಬೆಳೆಸಿದ ಈ ನಿಯೋಗ, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.
ವಿಮಾನ ನಿಲ್ದಾಣದಿಂದ ಪೊಲೀಸ್ ಭದ್ರತೆಯಲ್ಲಿ ವಂಡರ್‌ಲಾ ರೆಸಾರ್ಟ್‌ಗೆ ತೆರಳಲಿರುವ ಶಾಸಕರು, ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಶಾಸಕರನ್ನು ಬೆಂಗಳೂರಿಗೆ ಕರೆತರಲಾಗಿದೆ ಎಂದು ತಿಳಿದುಬಂದಿದೆ.
PublicNext
10/06/2026 08:34 am
LOADING...