ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

VIDEO : ನಕಲಿ ಸಹಿ ಹಗರಣದ ಬಿಸಿ: ಮಮತಾ ಬ್ಯಾನರ್ಜಿ ನಿವಾಸದ ಮೇಲೆ ಸಿಐಡಿ ದಾಳಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ ಮೂಡಿಸಿರುವ ನಕಲಿ ಸಹಿ ಹಗರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ನಕಲಿ ಸಹಿ ಹಗರಣಕ್ಕೆ ಸಂಬಂಧಿಸಿದಂತೆ ಬ್ಯಾನರ್ಜಿ ಮನೆ ಮೇಲೆ ಸಿಐಡಿ ದಾಳಿ ನಡೆಸಿದೆ. ಮೂರು ಬಾರಿ ಮುಖ್ಯಮಂತ್ರಿಯಾಗಿರುವ ಮಮತಾ ಬ್ಯಾನರ್ಜಿ ಅವರ ಪಕ್ಷದಲ್ಲಿ ಶಾಸಕರ ನಕಲಿ ಸಹಿ ವಿವಾದವು ವಿಭಜನೆಗೆ ಕಾರಣವಾಗಿದೆ ಎನ್ನಲಾಗಿದ್ದು, ಈ ಪ್ರಕರಣದ ತನಿಖೆಯನ್ನು ಸಿಐಡಿ ಚುರುಕುಗೊಳಿಸಿದೆ.

ನಿನ್ನೆ ಮಧ್ಯಾಹ್ನದ ಸುಮಾರಿಗೆ, ರಾಜ್ಯ ತನಿಖಾ ಸಂಸ್ಥೆಯ ಅಧಿಕಾರಿಗಳು, ಕಾಲಿಘಾಟ್ ಪೊಲೀಸ್ ಠಾಣೆಯ ಸಿಬ್ಬಂದಿ ಮತ್ತು ಮಹಿಳಾ ಪೊಲೀಸ್ ಸಿಬ್ಬಂದಿಯ ದೊಡ್ಡ ತುಕಡಿಯೊಂದಿಗೆ ಬಿ ಹರೀಶ್ ಚಟರ್ಜಿ ಸ್ಟ್ರೀಟ್‌ನಲ್ಲಿರುವ ಅಧಿಕೃತ ನಿವಾಸ ಮತ್ತು ಪಕ್ಷದ ಕೇಂದ್ರ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಇದು ಪ್ರದೇಶದಲ್ಲಿ ಬಿಗುವಿನ ವಾತಾವರಣ ಸೃಷ್ಟಿಸಿದೆ.

ವಿರೋಧ ಪಕ್ಷದ ನಾಯಕನ ಮಾನ್ಯತೆಗಾಗಿ ವಿಧಾನಸಭಾ ಸ್ಪೀಕರ್‌ಗೆ ಸಲ್ಲಿಸಲಾದ ಪ್ರಸ್ತಾವನೆಗೆ ತೃಣಮೂಲ ಶಾಸಕರ ಸಹಿಗಳನ್ನು ನಕಲಿ ಮಾಡಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಈ ತನಿಖೆ ನಡೆಯುತ್ತಿದೆ. ಈ ಕುರಿತು ಮಾಹಿತಿ ಕೋರಿ ಸಿಐಡಿ ಈ ಹಿಂದೆ ನೋಟಿಸ್‌ ನೀಡಿತ್ತು.

ಸಿಐಡಿ ಹೊರಡಿಸಿದ್ದ ಹಿಂದಿನ ನೋಟಿಸ್‌ಗೆ ತೃಣಮೂಲ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಸಲ್ಲಿಸಿದ ಉತ್ತರದ ಆಧಾರದ ಮೇಲೆ ಈ ಶೋಧ ಕಾರ್ಯಾಚರಣೆಯನ್ನು ನಡೆಸಲಾಗಿದೆ ಎಂದು ಸ್ಥಳದಲ್ಲಿ ಹಾಜರಿದ್ದ ಸಿಐಡಿ ಅಧಿಕಾರಿಗಳು ತಿಳಿಸಿದ್ದಾರೆ. ನೋಟಿಸ್‌ಗೆ ಉತ್ತರ ನೀಡಿದ ಕೆಲವು ದಿನಗಳ ನಂತರವೇ ಸಿಐಡಿ ಈ ಕ್ರಮ ಕೈಗೊಂಡಿರುವುದು ಗಮನಾರ್ಹ.

Edited By : Abhishek Kamoji
PublicNext

PublicNext

10/06/2026 09:07 am

Cinque Terre

23.59 K

Cinque Terre

0