ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾಜಿ ಸಚಿವ ಜಮೀರ್‌ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ಕೋರ್ಟ್‌ ತಡೆಯಾಜ್ಞೆ

ದಾವಣಗೆರೆ ಉಪ ಚುನಾವಣೆ ವಿಚಾರದಲ್ಲಿ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರ ಗೌರವಕ್ಕೆ ಧಕ್ಕೆ ತರುವಂತಹ ಯಾವುದೇ ಮಾನ ಹಾನಿಕರ ಸುದ್ದಿಗಳ ಪ್ರಸಾರಕ್ಕೆ ಬೆಂಗಳೂರಿನ ನ್ಯಾಯಾಲಯವು ಮಂಗಳವಾರ ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡಿದೆ.

ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಲ್ಲಿಸಿದ್ದ ದಾವೆಯ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಹೆಚ್ಚುವರಿ ಸಿಟಿ ಸಿವಿಲ್ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ ಸಿ ಭಾನುಮತಿ ಅವರು ಮಧ್ಯಂತರ ಆದೇಶ ಹೊರಡಿಸಿದ್ದಾರೆ.

ದಾವೆಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿರುವ ಮಾಧ್ಯಮ ಸಂಸ್ಥೆಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಆಗಸ್ಟ್ 10ಕ್ಕೆ ಮುಂದೂಡಲಾಗಿದೆ.

ದಾವೆ ಆಲಿಸಿದ ನ್ಯಾಯಾಧೀಶರು, ದಾವಣಗೆರೆ ಉಪ ಚುನಾವಣೆಗೆ ಸಂಬಂಧಿಸಿದಂತೆ ದಾವೆದಾರರಾದ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ಯಾವುದೇ ರೀತಿಯ , ಲೇಖನ, ಆಡಿಯೋ ವಿಡಿಯೋ, ಚಿತ್ರ ಗಳನ್ನು ಮುದ್ರಣ, ವಿದ್ಯುನ್ಮಾನ, ಸಾಮಾಜಿಕ ಜಾಲತಾಣ, ಡಿಜಿಟಲ್, ಆನ್ ಲೈನ್, ವೆಬ್ ಪೋರ್ಟಲ್, ವಾಟ್ಸಾಪ್ ಸೇರಿದಂತೆ ಯಾವುದೇ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ, ಅಪ್ ಲೋಡ್, ಪೋಸ್ಟ್, ಮರು ಪೋಸ್ಟ್ ಮಾಡದಂತೆ ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡಿದೆ.

ಜಮೀರ್ ಅಹ್ಮದ್ ಪರ ವಕೀಲ ಶೇಕ್ ಇಸ್ಮಾಯಿಲ್ ಜಬೀವುಲ್ಲಾ ವಾದ ಮಂಡಿಸಿದರು.

Edited By : Abhishek Kamoji
PublicNext

PublicNext

10/06/2026 10:41 am

Cinque Terre

31.73 K

Cinque Terre

0

ಸಂಬಂಧಿತ ಸುದ್ದಿ