ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಕಿರುಕುಳ ನೀಡಲಾಗುತ್ತಿದೆ. ಕೆಲ ಕಾಮುಕರು 'ಜಲಗಾರ ಯುನಿವರ್ಸಿಟಿ' ಎಂಬ ಹೆಸರಿನಲ್ಲಿ ನಕಲಿ ಖಾತೆಗಳನ್ನು ತೆರೆದು ಅಶ್ಲೀಲ ಪದಗಳು ಹಾಗೂ ಅತ್ಯಂತ ಕೆಟ್ಟದಾಗಿ ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ. ವಿಜಯಲಕ್ಷ್ಮಿ ಅವರನ್ನು ವೈಯಕ್ತಿಕವಾಗಿ ಟೀಕಿಸಿ, ನಿಂದಿಸುವ ಮೂಲಕ ಈ ಕಿರುಕುಳ ಮುಂದುವರಿದಿದೆ.
ವಿಜಯಲಕ್ಷ್ಮಿ ಸಿನಿಮಾ ನೋಡಲು ಹೋದ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು, "ಇವರೇ ನೋಡಿ ಕ್ರಿಮಿನಲ್ ದರ್ಶನ್ ಹೆಂಡತಿ", "ಅವಳ ಬಾಯ್‌ಫ್ರೆಂಡ್, ಗಂಡ ಜೈಲಿನಲ್ಲಿ" ಎಂದು ಆಕ್ಷೇಪಾರ್ಹವಾಗಿ ನಿಂದಿಸಿದ್ದಾರೆ. "ಇವಳು 'Rapid Driver' ಕಾರಿನಲ್ಲಿ ಓಡಾಡುತ್ತಾಳೆ" ಎಂಬಂತಹ ಸಂದೇಶಗಳನ್ನೂ ಸಹ ಹರಡಲಾಗಿದೆ. ಈ ರೀತಿ ಅತಿ ಕೆಟ್ಟದಾಗಿ ಕಾಮೆಂಟ್‌ಗಳನ್ನು ಮಾಡುವ ಜೊತೆಗೆ, ವಿಜಯಲಕ್ಷ್ಮಿ ಅವರು ದೂರು ನೀಡದಂತೆ 'ವಿಜಿಗೆ ಕಂಪ್ಲೇಂಟ್ ಕೊಡಬೇಡ ಅಂತ ಹೇಳಿ ಪ್ಲೀಸ್' ಎಂದು ಮನವಿ ಮಾಡುವ ರೀತಿಯಲ್ಲಿ ಒತ್ತಡ ಹೇರಲಾಗುತ್ತಿದೆ.
PublicNext
10/06/2026 12:40 pm
LOADING...