ಬೆಂಗಳೂರು : KSLSA ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ, ಜೂನ್ 25 ಕೊನೆ ದಿನ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (KSLSA) 2 ಚಾಲಕ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ.
2026ರ ಮೇ 27ಕ್ಕೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಸಾಮಾನ್ಯ ವರ್ಗಕ್ಕೆ ಗರಿಷ್ಠ 40 ವರ್ಷ, ಇತರೆ ಹಿಂದುಳಿದ ವರ್ಗಗಳಿಗೆ 45 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 500 ರೂ., ಇತರೆ ಹಿಂದುಳಿದ ವರ್ಗಗಳಿಗೆ 250 ರೂ. ಅರ್ಜಿ ಶುಲ್ಕವಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 25 ಆಗಿದೆ. ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಆಫ್‌ಲೈನ್ ಮೂಲಕ ಸಲ್ಲಿಸಬೇಕು.
PublicNext
10/06/2026 01:31 pm
LOADING...