ಮಹಾರಾಷ್ಟ್ರ: ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಭುಸಾವಳ ನಗರದ 'ವಂಜೋಲ ಚೌಕ್' ಇತ್ತೀಚಿನ ದಿನಗಳಲ್ಲಿ ಅತ್ಯಂತ ಅಪಾಯಕಾರಿ ಅಪಘಾತ ವಲಯವಾಗಿ ಮಾರ್ಪಟ್ಟಿದೆ. ಕಳೆದ ಕೇವಲ ಒಂದು ತಿಂಗಳ ಅವಧಿಯಲ್ಲಿ ಈ ಪ್ರಮುಖ ಛೇದಕದಲ್ಲಿ ಬರೋಬ್ಬರಿ 10 ರಸ್ತೆ ಅಪಘಾತಗಳು ಸಂಭವಿಸಿರುವುದು ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ.
ನಿರಂತರವಾಗಿ ಹೆಚ್ಚುತ್ತಿರುವ ಅಪಘಾತಗಳು ಮತ್ತು ಸರಣಿ ಸಾವು-ನೋವುಗಳಿಂದ ಬೇಸತ್ತಿರುವ ರಸ್ತೆ ಸವಾರರು ಮತ್ತು ಸ್ಥಳೀಯ ನಿವಾಸಿಗಳು, ಈಗ ಈ ಜಂಕ್ಷನ್‌ಗೆ “ಡೆತ್ ಟ್ರ್ಯಾಪ್” (ಮರಣ ಬಲೆ) ಎಂದೇ ಹೆಸರಿಟ್ಟಿದ್ದಾರೆ.
ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಅಧಿಕಾರಿಗಳು ಯಾವುದೇ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಅವೈಜ್ಞಾನಿಕ ರಸ್ತೆ ನಿರ್ಮಾಣ ಅಥವಾ ಸಂಚಾರ ನಿಯಂತ್ರಣದ ಕೊರತೆಯೇ ಇದಕ್ಕೆ ಮುಖ್ಯ ಕಾರಣ," ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ಸುರಕ್ಷತಾ ಕ್ರಮಗಳನ್ನು ತಕ್ಷಣವೇ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ನಿವಾಸಿಗಳು ಎಚ್ಚರಿಸಿದ್ದಾರೆ.
PublicNext
10/06/2026 02:39 pm
LOADING...