ಶಿರಸಿ : ಹೊಸಮಾರುಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಜೂನ್ 9ರಂದು ರಾತ್ರಿ ಕಾಲೇಜು ರಸ್ತೆಯ ಶ್ರೀ ಮಾರಿಕಾಂಬ ಕ್ರೀಡಾಂಗಣದ ಸಮೀಪ ಈ ಕಾರ್ಯಾಚರಣೆ ನಡೆದಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ರಾಜೀವ ನಗರದ 23 ವರ್ಷದ ಆನಂದ ತುರಿಮಣಿ, ತಂದೆ ಹನುಮಂತ ಬೋವಿವಡ್ಡರ ಎಂಬಾತನನ್ನು ಬಂಧಿಸಿದ್ದಾರೆ.
ಮಾದಕ ವಸ್ತು ವಶ
ಆರೋಪಿಯಿಂದ ಸುಮಾರು 10,400 ರೂ. ಮೌಲ್ಯದ 217 ಗ್ರಾಂ ಗಾಂಜಾ ಹಾಗೂ ಒಂದು ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಶಿರಸಿ ಹೊಸಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
10/06/2026 02:47 pm
LOADING...