ಶಿಗ್ಗಾವಿ : ರಾಜ್ಯದಲ್ಲಿ ವಿದ್ಯುತ್ ಸರಬರಾಜು ಕಂಪನಿಗಳ ಖಾಸಗೀಕರಣ ವಿರೋಧಿಸಿ ರೈತ ಸಂಘದ ತಾಲ್ಲೂಕು ಘಟಕದ ವತಿಯಿಂದ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು, ಗ್ರಾಮೀಣ ಭಾಗದ ರೈತಾಪಿ ವರ್ಗದವರು ತಮ್ಮ ಕೃಷಿ ಚಟುವಟಿಕೆಗಳಿಗೆ ಅತಿ ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್ ಬಳಸುತ್ತಾರೆ, ವಿದ್ಯುತನ್ನೇ ನಂಬಿಕೊಂಡು ಕೃಷಿ ಚಟುವಟಿಕೆ ನಡೆಸುವ ರೈತರು ಹಾಗೂ ಕಾರ್ಮಿಕರಿಗೆ ಹಾನಿಯಾಗುವ ಸಂಭವ ಇದೆ.
ಸಾರ್ವಜನಿಕರ ಹಿತದೃಷ್ಟಿಯಿಂದ ಹೆಸ್ಕಾಂ ಸಂಸ್ಥೆಯನ್ನು ಖಾಸಗಿಯವರಿಗೆ ಹಸ್ತಾಂತರಿಸುವುದನ್ನು ಕೈಬಿಡಬೇಕು. ಹಾಗೂ ಗೊಬ್ಬರವನ್ನು ನಿಗದಿತ ಬೆಲೆಗೆ ಮಾರದೇ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಇದನ್ನು ಅಧಿಕಾರಿಗಳು ತಪ್ಪಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.
PublicNext
10/06/2026 03:45 pm
LOADING...