ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಮೋದಿ ಸರ್ಕಾರಕ್ಕೆ 12 ವರ್ಷಗಳ ಸಂಭ್ರಮ: ಕಾಫಿನಾಡಲ್ಲಿ ವಿಶೇಷ ಪೂಜೆ - ಕಾರ್ಯಕರ್ತರ ಸಂಭ್ರಮ

ಚಿಕ್ಕಮಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಇಂದಿಗೆ ಯಶಸ್ವಿಯಾಗಿ 12 ವರ್ಷಗಳನ್ನು ಪೂರೈಸಿದೆ. ಇದರೊಂದಿಗೆ ಪ್ರಧಾನಿ ಮೋದಿ ಅವರು ಪ್ರಧಾನ ಮಂತ್ರಿಯಾಗಿ ಸತತ 4,399 ದಿನಗಳ ಆಡಳಿತವನ್ನು ಪೂರ್ಣಗೊಳಿಸುವ ಮೂಲಕ ಭಾರತದ ರಾಜಕೀಯ ಇತಿಹಾಸದಲ್ಲೇ ಅತ್ಯಂತ ದೀರ್ಘಾವಧಿವರೆಗೆ ಸೇವೆ ಸಲ್ಲಿಸಿದ ಮೊದಲ ಚುನಾಯಿತ ಪ್ರಧಾನಿ ಎಂಬ ಐತಿಹಾಸಿಕ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ದೇಶದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರೂ ಅವರು ಸತತವಾಗಿ 4,398 ದಿನಗಳ ಕಾಲ ಚುನಾಯಿತ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಇಂದು ನರೇಂದ್ರ ಮೋದಿ ಅವರು ಆ ದಾಖಲೆಯನ್ನು ಮುರಿದು ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಈ ಐತಿಹಾಸಿಕ ಸಾಧನೆ ಹಾಗೂ ಕೇಂದ್ರ ಸರ್ಕಾರದ 12 ವರ್ಷಗಳ ಆಡಳಿತದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ತಾಲೂಕು ಕಚೇರಿ ಸಮೀಪವಿರುವ ಗಣಪತಿ ದೇವಸ್ಥಾನದಲ್ಲಿ ಜಮಾಯಿಸಿದ ಕಾರ್ಯಕರ್ತರು, ಪ್ರಧಾನಿಗಳಿಗೆ ಮತ್ತಷ್ಟು ದೀರ್ಘಾಯುಷ್ಯ, ಉತ್ತಮ ಆರೋಗ್ಯ ಸಿಗಲಿ ಹಾಗೂ ಅವರ ಅಧಿಕಾರಾವಧಿ ಮತ್ತಷ್ಟು ಯಶಸ್ವಿಯಾಗಲಿ ಎಂದು ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

Edited By : Somashekar
PublicNext

PublicNext

10/06/2026 04:02 pm

Cinque Terre

7.24 K

Cinque Terre

0

ಸಂಬಂಧಿತ ಸುದ್ದಿ