ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಸೂರಜ್ ಹೆಗಡೆ ನಿಧನಕ್ಕೆ ಸಂತಾಪ

ಬೆಂಗಳೂರು: ರಾಜ್ಯ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರು ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ರವರ ಮೊಮ್ಮಗರಾದ ಸೂರಜ್ ಹೆಗಡೆ ಅವರ ಅಕಾಲಿಕ ನಿಧನಕ್ಕೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಂತಾಪ ವ್ಯಕ್ತಪಡಿಸಿದೆ.

ಬುಧವಾರ ಜಿಲ್ಲಾಡಳಿತ ಭವನದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರ ಕಚೇರಿಯಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಏರ್ಪಡಿಸಿ ಸೂರಜ್ ಹೆಗಡೆ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮೃತರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷ ಮೌನಾಚರಣೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಗ್ಯಾರಂಟಿ ಯೋಜನೆ ಅಧ್ಯಕ್ಷರಾದ ಬಿ ರಾಜಣ್ಣ "ಸೂರಜ್ ಹೆಗಡೆ ಅವರು ಅತ್ಯಂತ ಸರಳ ಹಾಗೂ ಸಜ್ಜನ ರಾಜಕಾರಣಿಯಾಗಿದ್ದರು. ದೇವರಾಜ ಅರಸು ಅವರ ರಾಜಕೀಯ ತತ್ವಗಳನ್ನು ಅಳವಡಿಸಿಕೊಂಡಿದ್ದ ಅವರ ಪಕ್ಷ ನಿಷ್ಠೆ ಹಾಗೂ ಕಾರ್ಯವೈಖರಿ ಎಲ್ಲರಿಗೂ ಮಾದರಿಯಾಗಿತ್ತು. ಸೂರಜ್ ಅವರು ಎಐಸಿಸಿ ಕಾರ್ಯದರ್ಶಿಯಾಗಿ ತಮಿಳುನಾಡು ಹಾಗೂ ಪುದುಚೆರಿ ರಾಜ್ಯದ ಉಸ್ತುವಾರಿಯಾಗಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಅವರ ಅಗಲಿಕೆ ಪಕ್ಷಕ್ಕೆ, ರಾಜ್ಯಕ್ಕೆ ತುಂಬಲಾರದ ನಷ್ಟ.

ಸೂರಜ್ ಹೆಗಡೆ ಅವರು ತಮ್ಮ ತಾತ ದೇವರಾಜ ಅರಸು ಅವರಂತೆ ಹಿಂದುಳಿದ ವರ್ಗಗಳು, ಕಾರ್ಮಿಕರ ಹಕ್ಕು, ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸುತ್ತಿದ್ದರು. ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿಗಳಾಗಿ ಪಕ್ಷದ ಸಂಘಟನೆ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದರು. ಈಗ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಸ್ಮರಿಸಿದರು.

ನಮ್ಮ ಹಾಗೂ ಸೂರಜ್ ಹೆಗಡೆ ಅವರ ಒಡನಾಟ ಚೆನ್ನಾಗಿತ್ತು. ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿಗೆ ಸಾಕಷ್ಟು ಸಲಹೆ, ಸೂಚನೆಗಳನ್ನು ನೀಡುತ್ತಿದ್ದರು. ಸೂರಜ್ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರಿಗೆ ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ನಾರಾಯಣಸ್ವಾಮಿ, ಅಬ್ದುಲ್ ಬಶೀರ್, ತಾಲ್ಲೂಕು ಅಧ್ಯಕ್ಷರು, ಅಧಿಕಾರಿಗಳು ಉಪಸ್ಥಿತರಿದ್ದರು.

Edited By : Nagaraj Tulugeri
PublicNext

PublicNext

10/06/2026 04:51 pm

Cinque Terre

3.68 K

Cinque Terre

0

ಸಂಬಂಧಿತ ಸುದ್ದಿ