ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆಯವರಿಂದ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಚರ್ಚೆ

ಬೆಂಗಳೂರು: ನೂತನ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಪ್ರಿಯಾಂಕ್ ಖರ್ಗೆ ಅವರು ನಗರ ಪೊಲೀಸರೊಂದಿಗೆ ನಡೆಸಿದ ಮೊದಲ ಸಭೆ ಇದಾಗಿದ್ದು, ವಿಶೇಷ ಮಹತ್ವ ಪಡೆದಿತ್ತು. ಸಭೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ನಗರದ ಹಿರಿಯ ಪೊಲೀಸ್ ಅಧಿಕಾರಿಗಳು, ಡಿಸಿಪಿಗಳು ಹಾಗೂ ಎಸಿಪಿಗಳು ಉಪಸ್ಥಿತರಿದ್ದರು. ಸಭೆಗೂ ಮುನ್ನ ನಗರ ಪೊಲೀಸರು ಗೃಹ ಸಚಿವರಿಗೆ ಗೌರವ ರಕ್ಷೆ ನೀಡಿ ಆದರದಿಂದ ಸ್ವಾಗತಿಸಿದರು.

Edited By : Shivu K
PublicNext

PublicNext

10/06/2026 05:03 pm

Cinque Terre

6.7 K

Cinque Terre

0