ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ : ಯಳಂದೂರು ಹಾಸ್ಟೆಲ್‌ಗೆ ಜಿಲ್ಲಾಧಿಕಾರಿ ಅನಿರೀಕ್ಷಿತ ಭೇಟಿ - ವಿದ್ಯಾರ್ಥಿನಿಯರಿಗೆ ಭರವಸೆ !

ಚಾಮರಾಜನಗರ : ಜಿಲ್ಲಾಧಿಕಾರಿ ಶ್ರೀರೂಪ ಅವರು ಯಳಂದೂರಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಪ್ರಿ-ಮೆಟ್ರಿಕ್‌ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ವಿದ್ಯಾರ್ಥಿನಿಯರಿಗೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಪರಿಶೀಲನೆ

ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿರುವ ಮೂಲ ಸೌಕರ್ಯಗಳು, ವಸತಿ ವ್ಯವಸ್ಥೆ, ಶೈಕ್ಷಣಿಕ ಸೌಲಭ್ಯಗಳು ಮತ್ತು ಕಲಿಕಾ ಚಟುವಟಿಕೆಗಳ ಬಗ್ಗೆ ಜಿಲ್ಲಾಧಿಕಾರಿಗಳು ಮಾಹಿತಿ ಪಡೆದರು. ಅಲ್ಲದೆ, ಅಡುಗೆ ಮನೆಗೆ ತೆರಳಿ ಆಹಾರ ಧಾನ್ಯಗಳ ಗುಣಮಟ್ಟ ಹಾಗೂ ಸಿದ್ಧಪಡಿಸಿದ್ದ ಆಹಾರವನ್ನು ಪರಿಶೀಲಿಸಿದರು. ವಿದ್ಯಾರ್ಥಿನಿಯರ ಆರೋಗ್ಯ ಮತ್ತು ಶೈಕ್ಷಣಿಕ ಪ್ರಗತಿಗೆ ಪೂರಕವಾದ ವಾತಾವರಣ ನಿರ್ಮಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Edited By : PublicNext Desk
PublicNext

PublicNext

10/06/2026 05:04 pm

Cinque Terre

7.11 K

Cinque Terre

0

ಸಂಬಂಧಿತ ಸುದ್ದಿ