ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸಂಭವಿಸಿದ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಪಾಕಿಸ್ತಾನ ಸೇನೆಗೆ ಸೇರಿದ Mi-17 ಹೆಲಿಕಾಪ್ಟರ್ ಪತನಗೊಂಡು 21 ಮಂದಿ ದುರ್ಮರಣಕ್ಕೀಡಾಗಿದ್ದಾರೆ.
ಮುಜಫರಾಬಾದ್‌ನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ತಾಂತ್ರಿಕ ದೋಷದಿಂದಾಗಿ ತುರ್ತು ಲ್ಯಾಂಡಿಂಗ್ ಮಾಡುವ ಪ್ರಯತ್ನದಲ್ಲಿ ಹೆಲಿಕಾಪ್ಟರ್ ನೆಲಕ್ಕುರುಳಿದೆ ಎನ್ನಲಾಗಿದೆ. ಪಾಕ್ ಆಕ್ರಮಿತ ಕಾಶ್ಮೀರ (PoK) ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಹೆಲಿಕಾಪ್ಟರ್‌ನಲ್ಲಿದ್ದ ಯಾರೊಬ್ಬರೂ ಬದುಕುಳಿದಿಲ್ಲ ಎಂದು ದೃಢಪಡಿಸಲಾಗಿದೆ. ಈ ದುರಂತದಲ್ಲಿ ಮೃತಪಟ್ಟವರಿಗೆ ಪಾಕಿಸ್ತಾನ ಸೇನಾ ಮುಖ್ಯಸ್ಥ ಮುನೀರ್ ಅವರು ಗೌರವ ಸಲ್ಲಿಸಿದ್ದಾರೆ.
PublicNext
10/06/2026 05:53 pm
LOADING...