ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ : ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ - ಮನೆ ಮನೆಗೆ ಬಿಎಲ್‌ಒ ಭೇಟಿ !

ಗದಗ : ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಶೇ.94.14 ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣಗೊಳಿಸಲಾಗಿದೆ. ಜಿಲ್ಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್ ತಿಳಿಸಿದರು.

ಗದಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಎಸ್ ಐ ಆರ್ ಕುರಿತು ಪತ್ರಿಕಾಗೋಷ್ಠಿ ನಡೆಸಿ ಅವರು ಮಾಹಿತಿ ನೀಡಿದರು.

ಎಸ್.ಐ.ಆರ್ ಕುರಿತು ರಾಜ್ಯದಾದ್ಯಂತ ಸಾಕಷ್ಟು ಚರ್ಚೆಗಳು ನಡೆದಿವೆ. ಸಾರ್ವಜನಿಕರಲ್ಲಿ ಉಂಟಾಗಿರುವ ಗೊಂದಲಗಳನ್ನು ನಿವಾರಿಸಲು ಪಾರದರ್ಶಕವಾಗಿ ಎಸ್.ಐ.ಆರ್ ಪ್ರಕ್ರಿಯೆ ನಡೆಸಲಾಗುವುದು. ಅರ್ಹ ಯಾವೊಬ್ಬ ಮತದಾರನೂ ಪಟ್ಟಿಯಿಂದ ಹೊರಗುಳಿಯಬಾರದು, ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂದು ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್ ಹೇಳಿದರು.

ಕಳೆದ ಆರು ತಿಂಗಳಿಂದ ಎಸ್.ಐ.ಆರ್ ಅಂಗವಾಗಿ ನಿರಂತರವಾಗಿ ಸಿದ್ಧತೆ ನಡೆಸಲಾಗಿದೆ. ಆಯೋಗದ ಮಾರ್ಗಸೂಚಿಯಂತೆ 2002ರ ಮತದಾರರ ಪಟ್ಟಿಯನ್ನು ಮಾನದಂಡವಾಗಿಟ್ಟುಕೊಂಡು, ಪ್ರಸ್ತುತ ಇರುವ 2025ರ ಮತದಾರರ ಪಟ್ಟಿಯೊಂದಿಗೆ ಹೋಲಿಕೆ ಹಾಗೂ ಮ್ಯಾಪಿಂಗ್ ಪ್ರಕ್ರಿಯೆ ನಡೆಸಲಾಗಿದೆ. ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜಿಲ್ಲೆಯಲ್ಲಿ ಈಗಾಗಲೇ ಶೇ 94.14 ರಷ್ಟು ನೈಜ ಮತದಾರರನ್ನು ಗುರುತಿಸಿ, ಕುಟುಂಬಗಳ ಲಿಂಕೇಜ್‌ನೊಂದಿಗೆ ಹೊಂದಾಣಿಕೆ ಮಾಡಲಾಗಿದೆ ಎಂದರು.

Edited By : PublicNext Desk
PublicNext

PublicNext

10/06/2026 06:10 pm

Cinque Terre

4.14 K

Cinque Terre

0

ಸಂಬಂಧಿತ ಸುದ್ದಿ