ಬೆಂಗಳೂರು : ರಾಜ್ಯದ ಆರೋಗ್ಯ ಇಲಾಖೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಆರೋಗ್ಯ ಇಲಾಖೆ ಸಂಬಂಧಿಸಿದಂತೆ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಇಲಾಖೆಯ ಯೋಜನೆಗಳು, ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿಸ್ತೃತ ಚರ್ಚೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.
ಆರೋಗ್ಯ ಇಲಾಖೆ ರಾಜ್ಯದ ಅತಿದೊಡ್ಡ ಮತ್ತು ಪ್ರಮುಖ ಇಲಾಖೆಯಾಗಿದ್ದು, ಗ್ರಾಮೀಣ ಭಾಗದಲ್ಲಿ ಸರ್ಕಾರಿ ಆಸ್ಪತ್ರೆಗಳು ಜನರಿಗೆ ಉತ್ತಮ ಸೇವೆ ನೀಡುತ್ತಿವೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಇನ್ನಷ್ಟು ಸಬಲಗೊಳಿಸುವ ಅಗತ್ಯವಿದೆ ಎಂದು ಸಚಿವರು ತಿಳಿಸಿದ್ದಾರೆ. ಪ್ರಸ್ತುತ ಇಲಾಖೆಯಲ್ಲಿ ಸುಮಾರು 1,290 ಎಂಬಿಬಿಎಸ್ ವೈದ್ಯರು, 900 ತಜ್ಞ ವೈದ್ಯರು ಹಾಗೂ 800 ನರ್ಸ್‌ಗಳ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ವೈದ್ಯರ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಎಂಬಿಬಿಎಸ್ ಪೂರ್ಣಗೊಳಿಸಿದ ಅಭ್ಯರ್ಥಿಗಳು ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಿದರೆ, ಅಗತ್ಯ ಮಾರ್ಗಸೂಚಿಗಳ ಆಧಾರದ ಮೇಲೆ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
PublicNext
10/06/2026 06:14 pm
LOADING...