ಬೀದರ್: ಬೀದರ್ ನಗರದಲ್ಲಿ ಗಾಂಜಾ ಸಾಗಾಟ ಹಾಗೂ ಮಾರಾಟ ನಡೆಸುತ್ತಿದ್ದವರ ಮೇಲೆ ಪ್ರತ್ಯೇಕ ದಾಳಿ ನಡೆಸಿದ ಪೊಲೀಸರು ಒಟ್ಟು ₹14.50 ಲಕ್ಷ ಮೌಲ್ಯದ 25 ಕೆ.ಜಿ. ಗಾಂಜಾ ಜಪ್ತಿ ಮಾಡಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ನಗರದ ಇರಾನಿ ಗಲ್ಲಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿ, ಬಂಧಿತರಿಂದ ₹8 ಲಕ್ಷ ಮೌಲ್ಯದ 16 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಅದೇ ಇರಾನಿ ಗಲ್ಲಿಯಲ್ಲಿ ಓರ್ವ ಮಹಿಳೆ, ಪುರುಷ ಇಬ್ಬರು ಅಕ್ರಮವಾಗಿ ಮಾರಾಟಕ್ಕೆ ಸಾಗಾಟ ಮಾಡುವ ವೇಳೆ ದಾಳಿ ನಡೆಸಿ ಇಬ್ಬರನ್ನು ಬಂಧಿಸಿ, ಅವರಿಂದ ₹4.50 ಲಕ್ಷ ಮೌಲ್ಯದ 9 ಕೆ.ಜಿ. ಗಾಂಜಾ ಹಾಗೂ ಸಾಗಾಟಕ್ಕೆ ಬಳಸಲಾಗುತ್ತಿದ್ದ 1 ಆಟೋ ರಿಕ್ಷಾ ವಶಪಡಿಸಿಕೊಂಡಿದ್ದಾರೆ.
ಎರಡು ಪ್ರಕರಣಗಳಲ್ಲಿ ಒಟ್ಟು 25 ಕೆ.ಜಿ. ಗಾಂಜಾ, ₹12.50 ಲಕ್ಷ ಮೌಲ್ಯದ ಮಾದಕ ವಸ್ತು ಹಾಗೂ ₹2 ಲಕ್ಷ ಮೌಲ್ಯದ ವಾಹನ ಸೇರಿ ₹14.50 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
PublicNext
10/06/2026 09:24 pm
LOADING...