ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಹೊಸ ಪರಿಹಾರ: 'ಮೊಬಿಲಿಟಿ ಮಿಷನ್' ಸ್ಥಾಪನೆಗೆ ಗೃಹ ಸಚಿವರ ಚಿಂತನೆ!

ಬೆಂಗಳೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರು ಪೊಲೀಸ್ ಕಮಿಷನರ್ ವಲಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಮಾಹಿತಿ ಪಡೆಯಲು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ, ಡ್ರಗ್ಸ್, ನಾರ್ಕೋಟಿಕ್, ಅಪರಾಧ ನಿಯಂತ್ರಣ ಹಾಗೂ ಸಂಚಾರ ಸಮಸ್ಯೆಗಳ ಬಗ್ಗೆ ಅವರು ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದರು.

ನಗರದ ಸಂಚಾರ ದಟ್ಟಣೆಯ ಸಮಸ್ಯೆಯನ್ನು ನಿವಾರಿಸಲು ಶೀಘ್ರದಲ್ಲೇ 'ಮೊಬಿಲಿಟಿ ಮಿಷನ್' ಸ್ಥಾಪಿಸಲಾಗುವುದು ಎಂದು ಸಚಿವರು ತಿಳಿಸಿದರು. ಈ ಮಿಷನ್ ಅನ್ನು ಖಾಸಗಿ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕಾರ್ಯರೂಪಕ್ಕೆ ತರಲಾಗುವುದು ಎಂದು ಅವರು ಹೇಳಿದರು.

ಕೆಳಮಟ್ಟದ ಕೆಲವು ಅಧಿಕಾರಿಗಳು ರೌಡಿಗಳೊಂದಿಗೆ ಹುಟ್ಟುಹಬ್ಬ ಆಚರಿಸುವುದು ಹಾಗೂ ಅವರೊಂದಿಗೆ ಸುತ್ತಾಡುವುದು ಕಂಡುಬಂದಿದ್ದು, ಇಂತಹ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದರು. ಇದು ಪೊಲೀಸ್ ಇಲಾಖೆಯ ಘನತೆಗೆ ಧಕ್ಕೆ ತರುವಂಥದ್ದು ಎಂದು ಅವರು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ಡ್ರಗ್ಸ್ ಹಾವಳಿಯನ್ನು ತಡೆಗಟ್ಟಲು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಖರ್ಗೆ ಹೇಳಿದರು. ಹೆಚ್ಚಾಗಿ ಬೇರೆ ರಾಜ್ಯಗಳಿಂದ ಡ್ರಗ್ಸ್ ಸಾಗಾಟವಾಗುತ್ತಿದ್ದು, ಇದನ್ನು ನಿಯಂತ್ರಿಸಲು ಶೀಘ್ರದಲ್ಲೇ ಒಂದು ನೀಲಿ ನಕ್ಷೆಯನ್ನು (ಬ್ಲೂಪ್ರಿಂಟ್) ಸಿದ್ಧಪಡಿಸಲಾಗುವುದು. ಇದಕ್ಕಾಗಿ, ಬೇರೆ ರಾಜ್ಯಗಳು ಮತ್ತು ದೇಶಗಳಲ್ಲಿ ಅಳವಡಿಸಿಕೊಂಡಿರುವ ಯಶಸ್ವಿ ವಿಧಾನಗಳನ್ನು ಅಧ್ಯಯನ ಮಾಡಲಾಗುವುದು ಎಂದು ಅವರು ತಿಳಿಸಿದರು.

Edited By : Vinayak Patil
PublicNext

PublicNext

10/06/2026 09:27 pm

Cinque Terre

3.48 K

Cinque Terre

0