ಪುತ್ತೂರು: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮಳೆಯ ಜೊತೆಗೆ ಭಾರೀ ಗಾಳಿಯೂ ಬೀಸಲಾರಂಭಿಸಿದೆ. ಮೋಡ ಕವಿದ ವಾತಾವರಣ ಜಿಲ್ಲೆಯಾದ್ಯಂತ ಹರಡಿದ್ದು, ಮುಂದಿನ ಎರಡು ದಿನಗಳ ಕಾಲ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ಈಗಾಗಲೇ ನೀಡಿದೆ. ಇಂದು ಬೆಳಗ್ಗಿನಿಂದಲೇ ಭಾರೀ ಮಳೆಯಾಗುತ್ತಿದ್ದು, ಬರಿದಾಗಿದ್ದ ಹಳ್ಳ-ತೊರೆಗಳಲ್ಲಿ ನೀರು ಹರಿಯಲಾರಂಭಿಸಿದೆ.
ಜಿಲ್ಲೆಯ ಸುಳ್ಯ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ , ಕಡಬ ಭಾಗದಲ್ಲಿ ಭಾರೀ ಮಳೆಯಾಗಿದೆ. ಮಳೆಯಿಂದಾಗಿ ಜಿಲ್ಲೆಯಲ್ಲಿ ಈವರೆಗೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಮುಂಜಾಗ್ರತಾ ಕ್ರಮವಾಗಿ ಪುತ್ತೂರು ಕೇಂದ್ರವಾಗಿರಿಸಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ಎಲ್ಲಾ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧಗೊಳಿಸಲಾಗಿದೆ.
Kshetra Samachara
10/06/2026 09:32 pm
LOADING...