ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಮನಗರ : ಜೂನ್.14 ರಂದು ಚನ್ನಪಟ್ಟಣಕ್ಕೆ ಅಂಬೇಡ್ಕರ್ ಮೊಮ್ಮೊಗಳು ಆಗಮನ!

ರಾಮನಗರ : ಇದೇ ಭಾನುವಾರ ಜೂನ್ 14 ರಂದು ಚನ್ನಪಟ್ಟಣದ ಅಂಬೇಡ್ಕರ್ ಭವನದಲ್ಲಿ ರಾಜ್ಯ SC/ST ಸರ್ಕಾರಿ ನೌಕರರ ಸಮನ್ವಯ ಸಮಿತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆಯೋಜಿಸಲಾಗಿದೆ.

ಈ ಕಾರ್ಯಕ್ರಮಕ್ಕೆ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ಮೊಮ್ಮಗಳಾದ ಆಯುಷ್ಮತಿ ರಮಾ ಅಂಬೇಡ್ಕರ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ ಎಂದು ಸಮಿತಿಯ ಪದಾಧಿಕಾರಿಗಳು ಅಂಬೇಡ್ಕರ್ ಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ವಿಷಕಂಠ ಹಾಗೂ ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

Edited By : Shivu K
PublicNext

PublicNext

10/06/2026 09:42 pm

Cinque Terre

9.47 K

Cinque Terre

0