ನವದೆಹಲಿ: ನವದೆಹಲಿಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿ ಮಾಡಿ ರಾಜ್ಯದ ಹಲವು ಯೋಜನೆಗಾಗಿ ಅನುಮತಿ ಕೋರಿ ಮನವಿ ಸಲ್ಲಿಸಿದ್ದಾರೆ.
ಬೆಂಗಳೂರಿನ ಡಬಲ್ ಡೆಕ್ಕರ್ ಯೋಜನೆ,ಸಣ್ಣ ಬದಲಾವಣೆ ಮಾಡಿರುವ ಮೆಟ್ರೋ ಮೂರನೇ ಹಂತ ಯೋಜನೆ,ಮೆಟ್ರೋ ಎರಡನೇ ಹಂತದ ಪರಿಷ್ಕೃತ ಯೋಜನಾ ವೆಚ್ಚಕ್ಕೆ ಅನುಮತಿ,ಮೆಟ್ರೋ ಮೂರನೇ ಎ ಹಂತಕ್ಕೆ ಅನುಮತಿ ಹಾಗೂ ಪ್ರಾದೇಶಿಕ ಕ್ಷಿಪ್ರ ರೈಲು ಸಾರಿಗೆ ವ್ಯವಸ್ಥೆಯನ್ನು ಬೆಂಗಳೂರು- ಮೈಸೂರು, ಬೆಂಗಳೂರು- ಕನಕಪುರ, ಬೆಂಗಳೂರು- ತುಮಕೂರು, ಬೆಂಗಳೂರು- ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು- ಕೋಲಾರ ನಡುವೆ ಪ್ರಾದೇಶಿಕ ಕ್ಷಿಪ್ರ ರೈಲು ಸಾರಿಗೆ ವ್ಯವಸ್ಥೆ (RRTS) ಜಾರಿಗೆ ಮನವಿ ಮಾಡಿದ್ದಾರೆ.
PublicNext
10/06/2026 10:03 pm
LOADING...