ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಾಕ್‌ಗೆ ಒಂದೂ ಹನಿ ನೀರೂ ಇಲ್ಲ: ಸಿಂಧೂ ಜಲ ಒಪ್ಪಂದ ಅಮಾನತು - ಭಾರತದ ದಿಟ್ಟ ಹೆಜ್ಜೆ

ನವದೆಹಲಿ: ಕಳೆದ ವರ್ಷದಿಂದ ಸಿಂಧೂ ಜಲ ಒಪ್ಪಂದವನ್ನು ಅಮಾನತಿನಲ್ಲಿಡಲಾಗಿದ್ದು, ನದಿಯ ಒಂದೇ ಒಂದು ಹನಿ ನೀರು ಕೂಡ ಪಾಕಿಸ್ತಾನಕ್ಕೆ ಹರಿಯದಂತೆ ನೋಡಿಕೊಳ್ಳಲು ಭಾರತವು ಪ್ರತಿಯೊಂದು ಪ್ರಯತ್ನವನ್ನು ಮಾಡುತ್ತಿದೆ ಎಂದು ಕೇಂದ್ರ ಜಲ ಸಂಪನ್ಮೂಲಗಳ ಸಚಿವ ಸಿ.ಆರ್. ಪಾಟೀಲ್ ಬುಧವಾರ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನಿರ್ದೇಶನದ ಮೇರೆಗೆ ಗೃಹ ಸಚಿವ ಅಮಿತ್ ಶಾ ಅವರು ಈ ವಿಷಯದ ವೈಯಕ್ತಿಕ ಮೇಲ್ವಿಚಾರಣೆಯನ್ನು ವಹಿಸಿಕೊಂಡಿದ್ದಾರೆ ಎಂದು ಅವರು ಹೇಳಿದರು. ಒಪ್ಪಂದವು ಅಮಾನತಿನಲ್ಲಿರುವುದರಿಂದ, ಪಾಕಿಸ್ತಾನಕ್ಕೆ ನೀರು ಹರಿಯದಂತೆ ತಡೆಯಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಿಂಧೂ ಜಲ ಒಪ್ಪಂದ ಕುರಿತು ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಕಾಮಗಾರಿಗಳು ನಿಗದಿತ ಸಮಯದಲ್ಲಿ ಪ್ರಗತಿಯಲ್ಲಿವೆ. ಮುಂಬರುವ ವರ್ಷಗಳಲ್ಲಿ ಪಾಕಿಸ್ತಾನಕ್ಕೆ ಸಿಂಧೂ ನದಿಯ ನೀರು ಹರಿಯುವುದು ಸಂಪೂರ್ಣವಾಗಿ ನಿಲ್ಲುತ್ತದೆ. ಒಂದೇ ಒಂದು ಹನಿ ನೀರು ಕೂಡ ಅಲ್ಲಿಗೆ ಹೋಗುವುದಿಲ್ಲ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು. ಕಳೆದ ವರ್ಷದ ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದರು. ಈ ದಾಳಿಯ ನಂತರ ಭಾರತವು ಪಾಕಿಸ್ತಾನದೊಂದಿಗಿನ ಈ ಒಪ್ಪಂದವನ್ನು ಅಮಾನತಿನಲ್ಲಿಟ್ಟಿತ್ತು. ಸಿಂಧೂ ಜಲ ಒಪ್ಪಂದವು ಸಿಂಧೂ ನದಿ ಮತ್ತು ಅದರ ಐದು ಉಪನದಿಗಳಾದ ಸಟ್ಲೆಜ್, ಬಿಯಾಸ್, ರಾವಿ, ಝೇಲಂ ಮತ್ತು ಚೀನಾಬ್ ನದಿಗಳ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ಭಾರತ ಮತ್ತು ಪಾಕಿಸ್ತಾನದ ನಡುವೆ ಮಾಡಿಕೊಂಡ ಒಪ್ಪಂದವಾಗಿದೆ. ವಿಶ್ವಬ್ಯಾಂಕ್ ಮಧ್ಯಸ್ಥಿಕೆ ವಹಿಸಿದ್ದ ಈ ಒಪ್ಪಂದಕ್ಕೆ ವಿಶ್ವಬ್ಯಾಂಕ್ ಕೂಡ ಸಹಿ ಹಾಕಿದೆ. ಕಾಶ್ಮೀರದ ಮೇಲಿನ ಮೊದಲ ಯುದ್ಧದ ನಂತರ ಒಂಬತ್ತು ವರ್ಷಗಳಿಗೂ ಹೆಚ್ಚು ಕಾಲ ನಡೆದ ಮಾತುಕತೆಗಳ ಬಳಿಕ ಈ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು.

Edited By : Nagaraj Tulugeri
PublicNext

PublicNext

10/06/2026 10:29 pm

Cinque Terre

24.93 K

Cinque Terre

0

ಸಂಬಂಧಿತ ಸುದ್ದಿ