ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರ್ತಿಯರ ಪಟ್ಟಿಯಲ್ಲಿ ಮಹತ್ವದ ಬದಲಾವಣೆಯಾಗಿದೆ. ಭಾರತದ ನಾಯಕಿ ಹರ್ಮನ್‌ಪ್ರೀತ್ ಕೌರ್, 726 ರನ್‌ಗಳೊಂದಿಗೆ ಮಾಜಿ ನಾಯಕಿ ಮಿಥಾಲಿ ರಾಜ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಮೂಲಕ ಹರ್ಮನ್‌ಪ್ರೀತ್ ಕೌರ್, ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಮಿಥಾಲಿ ರಾಜ್ ಜೊತೆ ಪಾತ್ರರಾಗಿದ್ದಾರೆ.
ಈ ಪಟ್ಟಿಯಲ್ಲಿ, ಭಾರತದ ಉಪನಾಯಕಿ ಸ್ಮೃತಿ ಮಂಧಾನ 524 ರನ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಯುವ ಆಟಗಾರ್ತಿ ಜೆಮಿಮಾ ರೊಡ್ರಿಗಸ್ 407 ರನ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ಪೂನಮ್ ರಾವತ್ 375 ರನ್‌ಗಳೊಂದಿಗೆ ನಾಲ್ಕನೇ ಸ್ಥಾನ ಪಡೆದಿದ್ದಾರೆ.
PublicNext
11/06/2026 07:21 am
LOADING...