ಬೆಂಗಳೂರು: ಪಿಎಂ ನರೇಂದ್ರ ಮೋದಿಯವರು ಈ ದೇಶದ ಪ್ರಧಾನಿಯಾಗಿ 12 ವರ್ಷಗಳನ್ನು ಪೂರೈಸಿದ ಹಿನ್ನೆಲೆ ಬಿಜೆಪಿ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದ್ದು, ವಿವಿಧ ದೇವಸ್ಥಾನಗಳಲ್ಲಿ ಪ್ರಧಾನಿ ಮೋದಿ ಅವರ ಹೆಸರಲ್ಲಿ ವಿಶೇಷ ಪೂಜೆ-ಪುನಸ್ಕಾರಗಳನ್ನು ಮಾಡಿ ಬಳಿಕ ಸಿಹಿ ಹಂಚಿ ಸಂತಸವನ್ನು ಹಂಚಿಕೊಂಡರು.
ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ವಿಧಾನಸೌಧದಲ್ಲಿರೋ ಅರಳೆಕಟ್ಟೆ ಮುನೇಶ್ವರ ಸ್ವಾಮಿಗೆ ಪ್ರಧಾನಿಯವರ ಹೆಸರಲ್ಲಿ ಪೂಜೆ ಸಲ್ಲಿಸಿದರೆ, ಮತ್ತೊಂದೆಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬಿಜೆಪಿ ಕಾರ್ಯಕರ್ತರೊಂದಿಗೆ ಮೆರವಣಿಗೆ ಸಾಗಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಸೇರಿದಂತೆ ಮತ್ತಿತರರು ಇದ್ದರು.
PublicNext
11/06/2026 07:55 am
LOADING...