ಭಟ್ಕಳ: ತಾಲೂಕಿನ ಹೆಬಳೆ ಗ್ರಾಮದ ವರಕೊಡ್ಲು ಮೈದಾನದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಭಟ್ಕಳ ಗ್ರಾಮೀಣ ಪೊಲೀಸರು ಆಟೋ ಚಾಲಕನನ್ನು ಬಂಧಿಸಿದ್ದಾರೆ.
ಬಂಧಿತನನ್ನು ಮಹ್ಮದ ಅಖೀಲ್ (25), ತಂದೆ ಮೊಹಮ್ಮದ ಜಾಫರ್, ಶಿರುಕುಳಿಹೊಂಡ ನಿವಾಸಿ ಎಂದು ಗುರುತಿಸಲಾಗಿದೆ. ಆರೋಪಿ ಯಾವುದೇ ಪರವಾನಗಿ ಇಲ್ಲದೆ ಸುಮಾರು 129 ಗ್ರಾಂ ಗಾಂಜಾ (ಅಂದಾಜು ಮೌಲ್ಯ ₹15,000)ವನ್ನು ಮಾರಾಟ ಮಾಡುವ ಉದ್ದೇಶದಿಂದ ತನ್ನ ಆಟೋ ರಿಕ್ಷಾದಲ್ಲಿ ಸಂಗ್ರಹಿಸಿಕೊಂಡಿದ್ದನು ಎನ್ನಲಾಗಿದೆ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಗಾಂಜಾವನ್ನು ಜಪ್ತಿ ಮಾಡಿದ್ದಾರೆ.
ಈ ಸಂಬಂಧ ಆರೋಪಿತನ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಈ ಕಾರ್ಯಾಚರಣೆಯನ್ನು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ಮಲ್ಲಿಕಾರ್ಜುನಯ್ಯ ಕೋರಾಣಿ ಅವರ ನೇತೃತ್ವದಲ್ಲಿ, ಪಿಎಸ್‌ಐ (ತನಿಖೆ) ಭರಮಪ್ಪ ಬೆಳಗಲಿ ಹಾಗೂ ಪೊಲೀಸ್ ಸಿಬ್ಬಂದಿಯ ತಂಡ ಯಶಸ್ವಿಯಾಗಿ ನಡೆಸಿತು.
Kshetra Samachara
11/06/2026 11:41 am
LOADING...