ಬಾಗಲಕೋಟೆ : ಸಿಎಂ ಡಿಕೆ ಶಿವಕುಮಾರ್ ಮೊದಲ ಸಂಪುಟ ಸಭೆಯಲ್ಲಿ ಘೋಷಣೆ ಮಾಡಿದಂತೆ ಪ್ರತಿ ತಾಲೂಕಿನಲ್ಲಿ ರೌಡಿಗಳ ನಿಯಂತ್ರಣಕ್ಕೆ ವಿಶೇಷ ತಂಡ ರಚನೆಗೆ ಆದೇಶ ನೀಡಿದ ಬೆನ್ನಲೇ, ಜಿಲ್ಲೆಯಲ್ಲಿ ರೌಡಿಸಂ ನಿಗ್ರಹ ದಳ ಕಾರ್ಯಾಚರಣೆ ಆರಂಭಿಸಿದೆ.
ಇಂದು ನಸುಕಿನ ಜಾವ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯ ಪಿಎಸ್ ಐ ಗಳ ನೇತೃತ್ವದಲ್ಲಿ ರೌಡಿಗಳ ಮನೆಗಳ ಮೇಲೆ ದಾಳಿ ಮಾಡಿದ್ದಾರೆ.
ದಾಳಿ ವೇಳೆ ಮನೆಯಲ್ಲಿ ಶೋಧ ಕಾರ್ಯ ನಡೆಸಿ ಮಾರಕಾಸ್ತ್ರಗಳು, ಶಸ್ತ್ರಾಸ್ತ್ರಗಳು, ವೈಯಕ್ತಿಕ ದಾಖಲಾತಿಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹಲವು ರೌಡಿಗಳ ಮನೆಯಲ್ಲಿ ಅಕ್ರಮವಾಗಿ ಇಟ್ಟಿದ್ದ ಶಸ್ತ್ರಾಸ್ತ್ರಗಳು, ದಾಖಲೆಗಳು ಇಲ್ಲದ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
PublicNext
11/06/2026 12:00 pm
LOADING...