ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಪ್ಪಿನಂಗಡಿ:ಗಡಿಯಾರ ಬಳಿ ರಸ್ತೆ ವಿಭಜಕಕ್ಕೆ ಕಾರು ಢಿಕ್ಕಿ- ಚಾಲಕ ಮೃತ್ಯು, ಮೂವರು ಪ್ರಯಾಣಿಕರಿಗೆ ಗಾಯ

ಉಪ್ಪಿನಂಗಡಿ: ಕಾರೊಂದು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಬುಧವಾರ ರಾ.ಹೆ. 75ರಲ್ಲಿ ಮಾಣಿ ಸಮೀಪ ಗಡಿಯಾರ ಎಂಬಲ್ಲಿ ನಡೆದಿದೆ. ಮೃತರನ್ನು ಸಕಲೇಶಪುರ ನಿವಾಸಿ ಲಕ್ಷ್ಮೀಕಾಂತ್ (21) ಎಂದು ಗುರುತಿಸಲಾಗಿದೆ.

ಕಾರಿನಲ್ಲಿದ್ದ ಸಕಲೇಶಪುರದ ರಂಜಿತ್, ದರ್ಶನ್, ಶೋಭಾ ಎಂಬವರು ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಮಂಗಳೂರಿನಿಂದ ಮರಳಿ ಸಕಲೇಶಪುರ ಕಡೆಗೆ ಹೋಗುವಾಗ ತಾಂತ್ರಿಕ ಸಮಸ್ಯೆಯಿಂದ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಡಿವೈಡರ್‌ಗೆ ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಅಪಘಾತದ ತೀವ್ರತೆಗೆ ಕಾರು ನುಜ್ಜುಗುಜ್ಜಾಗಿದೆ. ಸ್ಥಳೀಯರು ಸ್ಥಳಕ್ಕೆ ಧಾವಿಸಿ ಕಾರಿನಲ್ಲಿದ್ದವರನ್ನು ಹೊರ ತೆಗೆದು ಆಸ್ಪತ್ರೆಗೆ ದಾಖಲಿಸುವಲ್ಲಿ ಸಹಕರಿಸಿದರು. ಈ ಬಗ್ಗೆ ಪುತ್ತೂರು ಸಂಚಾರಿ ಸಬ್‌ಇನ್‌ಸ್ಪೆಕ್ಟರ್ ಸುಹಾಸ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

11/06/2026 12:33 pm

Cinque Terre

520

Cinque Terre

0

ಸಂಬಂಧಿತ ಸುದ್ದಿ