ನವದೆಹಲಿ: ಒಮಾನ್ ಕರಾವಳಿಯ ಹಾರ್ಮುಜ್ ಜಲಸಂಧಿಯ ಬಳಿ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯಲ್ಲಿ ಮೂವರು ಭಾರತೀಯ ನಾವಿಕರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಮಾಹಿತಿ ನೀಡಿದ್ದಾರೆ.
ನಿನ್ನೆ ನಡೆದ ಈ ದಾಳಿಯ ವೇಳೆ ಹಡಗಿನಲ್ಲಿ ಒಟ್ಟು 24 ಭಾರತೀಯ ನಾವಿಕರಿದ್ದರು. ಘಟನೆಯ ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸಿ 21 ನಾವಿಕರನ್ನು ಯಶಸ್ವಿಯಾಗಿ ರಕ್ಷಿಸಲಾಯಿತು. ಆದರೆ, ಮೂವರು ನಾವಿಕರು ನಾಪತ್ತೆಯಾಗಿದ್ದರು. ಇದೀಗ ನಾಪತ್ತೆಯಾಗಿದ್ದವರ ಪೈಕಿ ಇಬ್ಬರ ಮೃತದೇಹಗಳು ಪತ್ತೆಯಾಗಿವೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
PublicNext
11/06/2026 12:56 pm
LOADING...