ಮಸ್ಕತ್ (ಓಮನ್) : ಓಮನ್ ಕರಾವಳಿ ತೀರದಲ್ಲಿ ವಾಣಿಜ್ಯ ಸರಕು ಸಾಗಣೆ ಹಡಗೊಂದರ ಮೇಲೆ ಭೀಕರ ದಾಳಿ ನಡೆದಿದ್ದು, ಇಡೀ ಸಮುದ್ರ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ. ದಾಳಿಗೊಳಗಾದ ಹಡಗನ್ನು 'ಎಂಟಿ ಜಲವೀರ್' (MT Jalveer) ಎಂದು ಗುರುತಿಸಲಾಗಿದ್ದು, ಸುಮಾರು 20ಕ್ಕೂ ಹೆಚ್ಚು ಭಾರತೀಯ ಸಿಬ್ಬಂದಿಯಿದ್ದ ಈ ನೌಕೆಯ ಇಂಜಿನ್ ರೂಮ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಈ ಆತಂಕಕಾರಿ ಘಟನೆಯ ಬೆನ್ನಲ್ಲೇ, ಹಡಗಿನಲ್ಲಿರುವ ಭಾರತೀಯರ ರಕ್ಷಣೆಗೆ ಓಮನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಲರ್ಟ್ ಆಗಿದೆ.
ಘಟನೆ ಕುರಿತು ಓಮನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಟ್ವೀಟ್ ಮಾಡಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ತಿಳಿಸಿದೆ. "ಓಮನ್‌ನ ಶಿನಾಸ್ ಬಂದರು ಸಮೀಪ ಹಡಗೊಂದರ ಮೇಲೆ ನಡೆದಿರುವ ಘಟನೆಯ ಮಾಹಿತಿ ನಮಗೆ ಲಭ್ಯವಾಗಿದೆ. ನಾವು ಸ್ಥಳೀಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಹೆಚ್ಚಿನ ವಿವರಗಳನ್ನು ಕಲೆಹಾಕುತ್ತಿದ್ದೇವೆ" ಎಂದು ರಾಯಭಾರ ಕಚೇರಿ ಸ್ಪಷ್ಟಪಡಿಸಿದೆ.
ದಾಳಿಯ ಸ್ವರೂಪ ಹಾಗೂ ಅದಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಹಡಗಿನಲ್ಲಿರುವ ಭಾರತೀಯ ನಾವಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು, ಭಾರತೀಯ ವಿದೇಶಾಂಗ ಸಚಿವಾಲಯ ಹಾಗೂ ಓಮನ್ ದೇಶದ ಕಡಲ ರಕ್ಷಣಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆಗೆ ಇಳಿದಿವೆ.
PublicNext
11/06/2026 01:06 pm
LOADING...