ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಚ್ಚಾ ತೈಲ ಹೊರೆ ಇಳಿಸಲು ಸರ್ಕಾರದ ಹೆಜ್ಜೆ: ಎಥೆನಾಲ್ ಮಿಶ್ರಿತ ಪೆಟ್ರೋಲ್ ಅಬಕಾರಿ ಸುಂಕ ರದ್ದು

ನವದೆಹಲಿ: ಇಂಧನ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆಯಿಟ್ಟಿರುವ ಕೇಂದ್ರ ಸರ್ಕಾರ, ಹೆಚ್ಚಿನ ಪ್ರಮಾಣದ ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕಕ್ಕೆ ಸಂಪೂರ್ಣ ವಿನಾಯಿತಿ ನೀಡಿದೆ. ಎಥೆನಾಲ್ 22% (E22), 25% (E25), 27% (E27) ಮತ್ತು 30% (E30) ರಷ್ಟು ಮಿಶ್ರಣಗೊಂಡ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಸಂಪೂರ್ಣವಾಗಿ ತೆಗೆದುಹಾಕಲಾಗಿದೆ. ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆಯನ್ನು ಉತ್ತೇಜಿಸುವ ಮತ್ತು ಹಸಿರು ಇಂಧನ ಪರಿವರ್ತನೆಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಇತ್ತೀಚೆಗೆ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಜಾಗತಿಕವಾಗಿ ಕಚ್ಚಾ ತೈಲ ಬೆಲೆಗಳು ಏರಿಕೆ ಕಂಡಿವೆ. ಇದರ ನೇರ ಪರಿಣಾಮವಾಗಿ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಗಣನೀಯವಾಗಿ ಹೆಚ್ಚಾಗಿವೆ. ಕಳೆದ ತಿಂಗಳು ಒಂದೇ 11 ದಿನಗಳ ಅಂತರದಲ್ಲಿ ಪೆಟ್ರೋಲ್ ದರವು 7.5 ರೂ. ಹೆಚ್ಚಾಗಿದ್ದು, ವಾಹನ ಸವಾರರ ಮೇಲೆ ಭಾರಿ ಆರ್ಥಿಕ ಹೊರೆ ಬಿದ್ದಿದೆ.

ಭಾರತವು ತನ್ನ ಕಚ್ಚಾ ತೈಲದ ಅಗತ್ಯತೆಯ ಶೇ.87ರಷ್ಟನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳುತ್ತಿದೆ. ಇದು ದೇಶದ ಆರ್ಥಿಕತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ, ಆಮದು ಅವಲಂಬನೆಯನ್ನು ಕಡಿಮೆ ಮಾಡಿ, ದೇಶೀಯವಾಗಿ ಉತ್ಪಾದಿಸುವ ಎಥೆನಾಲ್ ಬಳಕೆಯನ್ನು ಹೆಚ್ಚಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದೆ.

Edited By :
PublicNext

PublicNext

11/06/2026 01:14 pm

Cinque Terre

12.1 K

Cinque Terre

0

ಸಂಬಂಧಿತ ಸುದ್ದಿ