ನವದೆಹಲಿ: ದೇಶದ ಪ್ರಗತಿ ಮತ್ತು ಮುಂದಿನ ಯೋಜನೆಗಳ ಕುರಿತು ಚರ್ಚಿಸಲು ನವದೆಹಲಿಯ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ನೀತಿ ಆಯೋಗದ 11ನೇ ಆಡಳಿತ ಮಂಡಳಿ ಸಭೆ ಇಂದು ಆರಂಭವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಈ ಮಹತ್ವದ ಸಭೆ ಜರುಗುತ್ತಿದೆ.
ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆಯುತ್ತಿರುವ ಈ ಉನ್ನತ ಮಟ್ಟದ ಸಭೆಯಲ್ಲಿ ವಿವಿಧ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ಗಳು/ಆಡಳಿತಾಧಿಕಾರಿಗಳು ಹಾಗೂ ಪದನಿಮಿತ್ತ ಸದಸ್ಯರಾಗಿರುವ ಕೇಂದ್ರ ಸಚಿವರು ಭಾಗವಹಿಸಿದ್ದಾರೆ. ದೇಶದ ಒಟ್ಟಾರೆ ಅಭಿವೃದ್ಧಿ ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವಿನ ಸಹಭಾಗಿತ್ವದ ಕುರಿತು ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ.
PublicNext
11/06/2026 03:03 pm
LOADING...